ಬೆಂಗಳೂರು: ಏಪ್ರಿಲ್ 30 ಬುಧವಾರ ರಾತ್ರಿ ನಗರದ ಮಾರತ್ತಹಳ್ಳಿಯಲ್ಲಿ ಯುವತಿಯೊಬ್ಬರ ಮೇಲೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ ನಡೆದಿದೆ. ಆರೋಪಿಯು ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಕಿಡಿಗೇಡಿ
ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ.
ಏಪ್ರಿಲ್ 30ರ ರಾತ್ರಿ 11:30ರ ಸುಮಾರಿಗೆ ಯುವತಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಕಿಡಿಗೇಡಿಯೊಬ್ಬ ಆಕೆಯನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲು ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ: ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಇತ್ತೀಚೆಗೆ ಸುದ್ದಗುಂಟೆಪಾಳ್ಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಘಟನೆಯು ನಗರವಾಸಿಗಳನ್ನು ಬೆಚ್ಚಿಬೀಳಿಸಿತ್ತು. ತಡರಾತ್ರಿ ಗೆಳತಿಯೊಂದಿಗೆ ಹೋಗುತ್ತಿದ್ದ ಯುವತಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎಳೆದಾಡಿ, ಮೈಕೈ ಮುಟ್ಟಿ ಕಿರುಕುಳ ನೀಡಿದ್ದ. ಆರೋಪಿಯು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದ. ಈ ಘಟನೆಯ ಬಳಿಕ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ, 10 ದಿನಗಳ ಬಳಿಕ ಆರೋಪಿ ಸಂತೋಷ್‌ನನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಇದನ್ನೂ ನೋಡಿ: ಅನುಭವ ಮಂಟಪ; ಬಸವಾದಿ ಶರಣರ ವೈಭವ; ಸಾಂಸ್ಕೃತಿಕ ಉತ್ಸವದ ನೇರಪ್ರಸಾರ