ಮಂಗಳೂರು: ರಾಜ್ಯದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದೂ, ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದೀಗ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು
ಹೌದು, ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಮೂಲದ ಪ್ರದೀಪ್ (40) ಯುವತಿಗೆ ಲೈಂಗಿಕ ಕಿಕುಕುಳ ನೀಡಿದ್ದಾನೆ.
ಇದನ್ನೂ ಓದಿ: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 10 ಲಕ್ಷ ರೂ ಪರಿಹಾರ ಘೋಷಣೆ
ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಕ್ಷಣವೇ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ನೋಡಿ: IPL 2025 | ಪ್ಲೇಆಫ್ ಲೆಕ್ಕಾಚಾರ ಶುರು: ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? Janashakthi Media