ಅಕ್ಷರ ದಾಸೋಹ ತಾಲ್ಲೂಕಾಧಿಕಾರಿ ಅಶೋಕ ಕಂಬಾರ ಅವರಿಗೆ ಮನವಿ ಪತ್ರ ಸಲ್ಲಿಸಿದ ಎಸ್ಎಫ್ಐ
ಶಿಗ್ಗಾಂವಿ: ಮಧ್ಯಾಹ್ನ ಬಿಸಿಯೂಟ ಸೇವಿಸಿ 36 ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮಲ್ಲೂರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ವರದಿಯಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿದೆ.
ಅಷ್ಟೆ ಅಲ್ಲದೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಬೇಕು ಹಾಗೂ ಪ್ರತಿ ವಾರಕ್ಕೊಮ್ಮೆ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಅಕ್ಷರ ದಾಸೋಹ ತಾಲ್ಲೂಕಾಧಿಕಾರಿ ಅಶೋಕ ಕಂಬಾರ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಹೆರಿಗೆಗೆಂದು ತೆರಳಿದ ಯುವತಿ ಮೃತ; ಎ.ಜೆ. ಆಸ್ಪತ್ರೆ ನಿರ್ಲಕ್ಷ್ಯ ಆರೋಪ
ಈ ಸಂದರ್ಭದಲ್ಲಿ ಎಸ್.ಎಫ್.ಐ.ತಾಲ್ಲೂಕು ಅಧ್ಯಕ್ಷ ರವಿ ಬಂಕಾಪುರ ಮಾತನಾಡಿ, “ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಆರೋಗ್ಯವಾಗಿರಲು ಸೂಕ್ತ ಚಿಕಿತ್ಸೆ ನೀಡಬೇಕು. ಊಟದ ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು ಹಾಗೂ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ ಮಾಡಬೇಕು” ಎಂದು ಹೇಳಿದರು.
“ಪ್ರತಿ ವಾರಕ್ಕೊಮ್ಮೆ ಎಲ್ಲಾ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆಗೆ ಒಳಪಡಿಸಿ ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಒದಗಿಸಬೇಕು. ಈ ರೀತಿಯ ಘಟನೆ ಮರುಕಳಿಸದಂತೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ರವಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್.ಎಫ್.ಐ. ತಾಲ್ಲೂಕು ಕಾರ್ಯದರ್ಶಿ ಅರ್ಜುನ ರಜಪೂತ, ಮುಖಂಡರಾದ ಅಣ್ಣಪ್ಪ ಕೊರವರ, ಯಲ್ಲಪ್ಪ ಹೂಗಾಡಿ, ಶ್ರೀನಿವಾಸ ಮಣ್ಣವಡ್ದರ, ನವೀನ ಕುಂದಗೋಳ, ಅಭಿಷೇಕ ಕ್ಯಾಲಕೊಂಡ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಡಿಯೊ ನೋಡಿ: ಸೌಜನ್ಯ ಹತ್ಯೆಗೆ ನ್ಯಾಯ ಇಲ್ಲವೆ? ಧರ್ಮಸ್ಥಳದ ಮಹಿಮೆ ಇಷ್ಟೆನಾ? Janashakthi Media