ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರಿಗೆ ಎಸ್‌ಎಫ್‌ಐ ನೇತೃತ್ವದಲ್ಲಿ ಮನವಿ
ಹಾವೇರಿ: ಶಾಲಾ-ಕಾಲೇಜ್ ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಹಾವೇರಿ
ಹಾವೇರಿ ನಗರಕ್ಕೆ ಆಗಸ್ಟ್ 06 ರಂದು ಆಗಮಿಸಿದ್ದ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಹಾವೇರಿ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣ, ಶಾಲಾ – ಕಾಲೇಜು, ಹಾಸ್ಟೆಲ್ ಕಡೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಚೂಡಾಯಿಸುವುದು, ರೇಗಿಸುವ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದ್ದು ಒಬ್ಬಂಟಿಯಾಗಿ ಓಡಾಡಲು ವಿದ್ಯಾರ್ಥಿನಿಯರು, ಮಹಿಳೆಯರು ಭಯ ಪಡುವಂತ ವಾತಾವರಣ ನಿರ್ಮಾಣವಾಗಿದೆ ಎಂದರು.
ಇದನ್ನೂ ಓದಿ : ಸರ್ಕಾರಿ ಪ್ರೌಢ ಶಾಲೆಯ ಶುಲ್ಕ – ಬಿಸಿ ಊಟದ ವ್ಯವಸ್ತೆಯಲ್ಲಿ ಅಕ್ರಮ; ಎಸ್ಎಫ್ಐ ಪ್ರತಿಭಟನೆ
ಮಹಿಳೆಯರ ಮೇಲೆ ಅತ್ಯಾಚಾರ,ದೌರ್ಜನ್ಯ, ಶೋಷಣೆ, ಲೈಂಗಿಕ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಕೃತ್ಯಗಳಿಗೆ ಕಾರಣವಾಗಿವೆ. ಈ ಪ್ರಕರಣಗಳು ದೇಶಾದ್ಯಂತ, ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ಕೃತ್ಯಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜು, ಹಾಸ್ಟೆಲ್ ಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚನೆ ಮಾಡಬೇಕು. ಆದರೆ ಇದನ್ನು ಸರ್ಕಾರ ಜಾರಿ ಮಾಡಿಲ್ಲ ತಕ್ಷಣವೇ ರಚನೆ ಮಾಡಬೇಕು ಎಂದು ಆಗ್ರಹಿಸಿದರು.
ಹಾವೇರಿ ಜಿಲ್ಲೆಯಲ್ಲಿ ಕೂಡ ಪ್ರತಿನಿತ್ಯವೂ ಮಹಿಳೆಯರ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ, ಕೊಲೆಗಳು ನಡೆಯುತ್ತಿದ್ದು ಇತರಹದ ಪ್ರಕರಣಗಳ ತಡೆಯುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ನಿರ್ಲಕ್ಷದಿಂದ ದೌರ್ಜನ್ಯಗಳು, ಅತ್ಯಾಚಾರಗಳು ಹೆಚ್ಚುತ್ತಲಿವೆ. ಬಸ್ ನಿಲ್ದಾಣ, ಶಾಲಾ-ಕಾಲೇಜ್ , ಕಾಂಪೌಂಡ್ ಗೋಡೆಯ ಮೇಲೆ ಕುಳಿತುಕೊಂಡು ರೇಗಿಸುವುದು, ಚೂಡಾಯಿಸುವ ಕೃತ್ಯ ಮಾಡುವ ಘಾತುಕರ ವಿರುದ್ಧ ಕ್ರಮಕೈಗೊಳಲು ಹೇಳಿದಾಗ ಪೋಲಿಸ್ ಅಧಿಕಾರಿಗಳು ಸಾಕ್ಷಿ ಕೇಳುತ್ತಾರೆ. ಕಂಪ್ಲೀಟ್ ಕೊಡಿ ಎಂದು ಹೇಳುತ್ತಾರೆ ಎಂದು ದೂರಿದರು.
ಕಾನೂನಾತ್ಮಕವಾಗಿ ಕೇಸ್ ದಾಖಲು ಮಾಡಬೇಕು ಆದರೆ ಕೆಲ ಮನೆತನಗಳಲ್ಲಿ ಹೆಣ್ಣು ಹೊರಗೆ ಓದಲು ಕಳಿಸುವುದ ಕಷ್ಟ ಈ ಸಂದರ್ಭದಲ್ಲಿ ಆ ಮಹಿಳೆ, ವಿದ್ಯಾರ್ಥಿನಿಯರು ಪೋಲಿಸ್ ಠಾಣೆ, ಕೋರ್ಟ್ ಅಂತಾ ಓಡಾಡಲು ಸಾದ್ಯವೇ? ಇಡೀ ಜಿಲ್ಲಾದ್ಯಂತಾ ಪಬ್ಲಿಕ್ ಗಳಲ್ಲಿ ಸಿ ಸಿ ಕ್ಯಾಮರಾಗಳು ಇಲ್ಲ. ಕೆಲವೊಂದು ಕಡೆ ಇದ್ದರೂ ಹೆಸರಿಗೆ ಅಷ್ಟೇ ಕಣ್ಣಿದ್ದು ಕುರುಡುನಂತೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರಿಂದ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಂಡು ವಿದ್ಯಾರ್ಥಿನಿಯರಿಗೆ- ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹಾಗೂ ಕೆಎಸ್ ಆರ್ ಟಿ ಸಿ, ಸಮಾಜ ಕಲ್ಯಾಣ, ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಡಿಡಿಪಿಐ, ಡಿಡಿಪಿಯು ಎಲ್ಲಾ ಶಾಲಾ ಕಾಲೇಜುಗಳಿಗೆ ನೋಟಿಸ್ ಹಾಕಿ ವಿದ್ಯಾರ್ಥಿನಿಯರು ರಕ್ಷಣೆಗಾಗಿ ಸಭೆ, ಕಾರ್ಯಕ್ರಮಗಳು ಆಯೋಜನೆ ಮಾಡಬೇಕು ಎಂದು ಎಸ್‌ಎಫ್‌ಐ ಕಾರ್ಯಕರ್ತರು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ|| ನಾಗಲಕ್ಷ್ಮೀ ಚೌದರಿ ಮಾತನಾಡಿ, ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಕೂಡಲೇ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ನೀವು ಸಲ್ಲಿಸಿದ ಇತರೆ ಬೇಡಿಕೆಗಳನ್ನು ನಾಳೆ ನಡೆಯುವ ಪರಿಶೀಲನಾ ಸಭೆಯಲ್ಲಿ ಚರ್ಚೆ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳಲು ನೋಟಿಸ್ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಮುಖಂಡರಾದ ಅರುಣ್ ನಾಗವತ್, ಚೈತ್ರಾ ಕೊರವರ್, ಗಂಗಾ, ಮೇಘನಾ, ಪ್ರಿಯಾಂಕ್ ಝರಪ್ಲ, ಚಂದನ, ಐಶ್ವರ್ಯ ಬಾರ್ಕಿ ಸೇರಿದಂತೆ ಹಲವು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ನೋಡಿ : ‘ಸ್ವಚ್ಛ ವಿಧಾನಸಭೆ’ಗಾಗಿ ಎಂಜಿನಿಯರ್ ಪಾದಯಾತ್ರೆ Janashakthi Media
