ಡೊನೇಷನ್ ಹಾವಳಿ ಕಡಿವಾಣಕ್ಕೆ ಎಸ್ಎಫ್ಐ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಭೋದನಾ ಶುಲ್ಕ ಸೇರಿದಂತೆ ವಿವಿಧ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಸಹಿತ ಹಣ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ. ಡೊನೇಷನ್

ಇಂದು ಎಸ್ಎಫ್ಐ ನೇತೃತ್ವದ ರಾಜ್ಯ ಪದಾಧಿಕಾರಿಗಳು ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಚರ್ಚಿಸಿದೆ. ಡೊನೇಷನ್

ರಾಜ್ಯದಲ್ಲಿ ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ಹಂತದ ತರಗತಿಯ ಪ್ರವೇಶಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಪಾಲಕರಿಂದ ಮನಬಂದಂತೆ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದು ಏಕೆ ಎಂದು ಎಸ್ಎಫ್ಐ ನಿಯೋಗ ಪ್ರಶ್ನೆ ಮಾಡಿದೆ.

ಸರ್ಕಾರದ 1983 ಶಿಕ್ಷಣ ಕಾಯ್ದೆಯನ್ನು ಉಲ್ಲಂಘನೆ ಮಾಡಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಟ್ಟೆ, ಶೂ ಸಾಕ್ಸ್, ನೋಟ್ ಬುಕ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ ಹಾಗೂ ಶಿಕ್ಷಣ ಇಲಾಖೆಯ 1983 ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನು ಓದಿ : ಅಧೀರ್ ರಂಜನ್‌ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ; ಬಂಗಾಳದಲ್ಲಿ ಖರ್ಗೆ ಫೋಟೋಗೆ ಮಸಿ!

2024-25 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನ ಶುಲ್ಕ ಮಾತ್ರ ತೆಗೆದುಕೊಳ್ಳಲು ಆದೇಶ ಮಾಡಿ ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ. 1983ರ ಶಿಕ್ಷಣ ಕಾಯಿದೆ ಪ್ರಕಾರ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ತಮ್ಮ ಶಾಲೆಯ ನೋಟಿಸ್ ಬೋರ್ಡ್ ನಲ್ಲಿ ಹಾಕಬೇಕು, ಮತ್ತು ರೋಸ್ಟರ್ ನಿಯಮ ಜಾರಿ ಮಾಡಿ, ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಹಾಕಬೇಕೆಂದು ನಿಯಮ ಇದ್ದರು ರಾಜ್ಯದಲ್ಲಿ ಯಾವ ಶಾಲೆಗಳು ಸಹ ಈ ನಿಯಮವನ್ನು ಜಾರಿಮಾಡಿರುವುದಿಲ್ಲ. ಈ ಕುರಿತು ಅನೇಕ ಬಾರಿ ವಿವಿಧ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಡಿಡಿಪಿಐ, ಬಿಇಒ ರವರಿಗೆ ನಮ್ಮ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿದರು ಕ್ರಮ ಜರುಗಿಸಲು ಮುಂದಾಗಿಲ್ಲ. ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಹಿಂದೇಟು ಹಾಕುವುದು ಯಾಕೆ? ಖಾಸಗಿ ಶಾಲೆಗಳ ಜೊತೆ ನಿಮ್ಮ ಇಲಾಖೆಯ ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಬರುತ್ತದೆ ಎಂದು ಎಸ್ಎಫ್ಐ ಆರೋಪಿಸಿದೆ.

ಆದ್ದರಿಂದ ಕೂಡಲೇ ಅಂತಹ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಆದೇಶ ಮಾಡಿ ಹಾಗೂ ನಮ್ಮ ಸಂಘಟನೆಯ ಮುಖಂಡರನ್ನು ಒಳಗೊಂಡಂತೆ ಜಂಟಿ ಸಭೆ ಮಾಡಿ. ಕೆಲವು ಖಾಸಗಿ ಶಾಲೆಗಳು RTE 2009 ರ ಕಾಯ್ದೆ ಉಲ್ಲಂಘನೆ ಮಾಡಿ ಮಕ್ಕಳಿಗೆ ಪ್ರವೇಶ ಕೊಡಲು ಪ್ರವೇಶ ಪರೀಕ್ಷೆ ಮಾಡುತ್ತರಿವುದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸಿದೆ.

ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಮಾನ್ಯ ಆಯುಕ್ತರು ಹಾಗೂ ಎಸ್ಎಫ್ಐ ಸಂಘಟನೆ ಮುಂಖಡರು ಜೊತೆಗೆ ಜಂಟಿ ಸಭೆ ಮಾಡಬೇಕು. ವಿವಿಧ ಜಿಲ್ಲೆಗಳಲ್ಲಿರುವ ಡಿಡಿಪಿಐ, ಹಾಗು ಬಿಇಒಗಳಿಗೆ ಖಾಸಗಿ ಶಾಲೆಗಳಲ್ಲಿನ ವಂತಿಗೆ ಹಾವಳಿಯನ್ನು ತಡೆಗಟ್ಟಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ,  ರಾಜ್ಯ ಕಾರ್ಯದರ್ಶಿ ಭೀಮನಗೌಡ, ರಾಜ್ಯ ಪದಾಧಿಕಾರಿಗಳಾದ ಶಿವಕುಮಾರ್ ಮ್ಯಗಳಮನಿ, ರಮೇಶ ವೀರಾಪೂರು, ಶಿವಪ್ಪ , ವಿಶ್ವ ಅಂಗಡಿ, ಚಿದಾನಂದ, ಬಾಬು ಇದ್ದರು.

ಇದನ್ನು ನೋಡಿ : ಖಾಸಗಿ ಶಾಲೆಗಳು ಪಡೆಯುತ್ತಿರುವುದು ಶುಲ್ಕವೋ! ವಸೂಲಿಯೋ!!?

Donate Janashakthi Media

Leave a Reply

Your email address will not be published. Required fields are marked *