ಅತಿಥಿ ಉಪನ್ಯಾಸಕರ ಬೇಡಿಕೆ ಈಡೇಸಲು ಎಸ್‌ಎಫ್‌ಐ ಆಗ್ರಹ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇಸಲು ಭಾರತ ವಿದ್ಯಾರ್ಥಿ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.  ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕ ಸಮಿತಿಯಿಂದ ತಾಲೂಕ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ಉಪನ್ಯಾಸಕರ 

ಎಸ್‌ಎಫ್‌ಐ ರಾಜ್ಯ ಅಧ್ಯಕ್ಷ ಅಮರೇಶ ಕಡಗದ ಮಾತನಾಡಿ, ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23 ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಕೊರೋನ ಸಾಂಕ್ರಾಮಿಕ ಸಂದರ್ಭದಲ್ಲಿ ಖಾಸಗೀ ಕಾಲೇಜುಗಳ ಶುಲ್ಕವನ್ನು ಕಟ್ಟದೇ ಖಾಸಗೀ ಕಾಲೇಜು ತೊರೆದು ಸರ್ಕಾರಿ ಕಾಲೇಜಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದರು. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿರುತ್ತದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಮಯಕ್ಕೆ ಸರಿಯಾದ ಸಾರಿಗೆ ಸೌಲಭ್ಯವಿಲ್ಲದ ನಡುವೆಯೂ ಗ್ರಾಮೀಣ ಭಾಗದಿಂದ ನಗರಕ್ಕೆ ಬಂದು ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ನಡೆಸಲು ಬರುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಸಲು ಎಸ್ಎಫ್ಐ ಆಗ್ರಹ

ರಾಜ್ಯ ಕಾರ್ಯದರ್ಶಿ ಭೀಮನಗೌಡ ಮಾತನಾಡಿ, ಪ್ರತೀ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ ಎಂದರು.

ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಲು ಮುಂದಾಗಿ ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಎಸ್‌ಎಫ್‌ಐ ಮನವಿ ಮಾಡಿಕೊಂಡಿದೆ.ಉಪನ್ಯಾಸಕರ 

ವಿಡಿಯೋ ನೋಡಿ:ಚಳಿಗಾಲದ ಅಧಿವೇಶನ ಬೆಳಗಾವಿ 2023| ಡಿಸೆಂಬರ್‌ 05 | ಭಾಗ 02 Live #wintersession2023

Donate Janashakthi Media

Leave a Reply

Your email address will not be published. Required fields are marked *