ಹಾಸನ : ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮತ್ತು ಹಾಸ್ಟೆಲ್‌ಗಳನ್ನು ಬಲಪಡಿಸುವುದು ಸರ್ಕಾರದ ಕರ್ತವ್ಯ, ಆ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್ಐ) ಆಗ್ರಹಿಸಿದೆ. ಶೈಕ್ಷಣಿಕ
ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ ನಡೆಯುತ್ತಿರುವ ರಾಜ್ಯವ್ಯಾಪಿ ಜಾಥಾ ಹಾಸನಕ್ಕೆ ತಲುಪಿದ್ದು, ಜಾಥಾವನ್ನು ವಿದ್ಯಾರ್ಥಿಗಳು ಸ್ವಾಗತಿಸಿಕೊಂಡರು. ನಂತರ ಬಹಿರಂಗ ಸಭೆ ನಡೆಯಿತು.
SFI ರಾಜ್ಯದ್ಯಕ್ಷರಾದ ಶಿವಪ್ಪ, ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ರಾಜ್ಯದಲ್ಲಿ 2010 ರಲ್ಲಿ 72,875 ಶಾಲೆಗಳು ಮತ್ತು 2,45,337 ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದರು. 2021 -22 ವೇಳೆಗೆ ರಾಜ್ಯದಲ್ಲಿ 47,386 ಶಾಲೆಗಳು ಮತ್ತು 1,45,326 ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಂದರೆ ಕಳೆದ 11 ವರ್ಷದಲ್ಲಿ ರಾಜ್ಯದಲ್ಲಿ 25,489 ಶಾಲೆಗಳು ಮುಚ್ಚಲಾಗಿದೆ. ಮತ್ತು 1,00,011 ಶಿಕ್ಷಕ ಹುದ್ದೆಗಳು ಕುಂಟಿತಗೊಂಡಿವೆ. ಸರ್ಕಾರ ಸರ್ಕಾರಿ ಶಾಲೆಗಳಿಗೆ ಸರಿಯಾದ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ವಿಫಲವಾದ ಕಾರಣದಿಂದ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತದೆ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ : ಎಸ್‌ಎಫ್‌ಐ: ಸಾರ್ವತ್ರಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೇಲ್ ಬಲವರ್ಧನೆಗಾಗಿ ಶೈಕ್ಷಣಿಕ ಜಾಥಾ
2022-23 ರಲ್ಲಿ 45.46 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. 2023-24 ರಲ್ಲಿ 42.94 ಲಕ್ಷ ಹಾಗೂ 2024-25 ರಲ್ಲಿ 40.74 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದಾರೆ. ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಶಾಲೆಗೆ ಸೇರುವವರ ಪ್ರಮಾಣ ಕಡಿಮೆಯಾಗುತ್ತಿದೆ. 5,77,00 ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ವರದಿ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಯಾಕೆ ಕಡಿಮೆಯಾಗುತ್ತಿದೆ ಎಂದು ಸರ್ಕಾರ ಅಧ್ಯಯನ ಮಾಡದೇ ದಾಖಲಾತಿ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ಹೊರಹಾಕಿದರು.
ಕಾರ್ಯಕ್ರಮದಲ್ಲಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಮತ್ತು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಎಂಜಿ ಮಾತನಾಡಿದರು. ಆರಂಭದಲ್ಲಿ ಜಿಲ್ಲಾ ಮುಖಂಡ ವಿವೆಕ್ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ಎಫ್ಐ ರಾಜ್ಯ ಮುಖಂಡರಾದ ಅರ್ಪಿತಾ ಹಾಸನದ ಮುಖಂಡರಾದ ವಿದ್ಯಾ, ಪ್ರೇಮ್ ದೇಶ್ ಸೇರಿದಂತೆ ವಿದ್ಯಾರ್ಥಿಗಳು, ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ಪ್ರೇಮಿಗಳು ಭಾಗವಹಿಸಿದ್ದರು.
ಇದನ್ನೂ ನೋಡಿ : ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ SFI ರಾಜ್ಯವ್ಯಾಪಿ ಜಾಥಾ Janashakthi Media
