ಗಂಗಾವತಿ : ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಸಮರ್ಪಕ ಬಸ್ ವ್ಯವಸ್ಥೆಗಾಗಿ, ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ವ್ಯವಸ್ಥೆಯನ್ನು ಕಲ್ಪಿಸಲು, ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಸಾವಿರಾರು ವಿದ್ಯಾರ್ಥಿಗಳು ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯ (SFI) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಂತರ ಶಾಸಕ ಜಿ. ಜನರ್ದಾನ ರೆಡ್ಡಿ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ:ಗಂಗಾವತಿ ಕಾನೂನು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ವ್ಯವಸ್ಥೆಗೊಳಿಸಲು ಎಸ್‌ಎಫ್‌ಐ ಪ್ರತಿಭಟನೆ
ಗಂಗಾವತಿ ತಾಲೂಕಿನಲ್ಲಿ ಬಸ್ ಗಳ ಸಮಸ್ಯೆ, ಹಾಸ್ಟೆಲ್ ಸಮಸ್ಯೆ, ಅನೇಕ ಸರಕಾರಿ ಶಾಲಾ ಕಾಲೇಜುಗಳಲ್ಲಿ ಈಗಲೂ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು. ವಿದ್ಯಾರ್ಥಿಗಳು ನಿತ್ಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ನಮಗೆ ಸ್ವಾತಂತ್ರ ಸಿಕ್ಕು 75 ವರ್ಷಗಳು ಕಳೆದರು ನಮ್ಮ ರಾಜ್ಯದ ಗ್ರಾಮೀಣ ಪ್ರದೇಶ, ಕೊಳಚೆ ಪ್ರದೇಶಗಳು, ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಇರುವಂತಹ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗದೇ ಇರುವುದು ಒಂದು ಕಡೆಯಾದರೆ, ಕೊರೋನ ಮತ್ತು ಕೊರೋನ ನಂತರದಲ್ಲಿ ಶೈಕ್ಷಣಿಕ ರಂಗದಲ್ಲಿ ಸಾಕಷ್ಟು ಸಮಸ್ಯೆಗಳನ್ನು ವಿದ್ಯಾರ್ಥಿಗಳು ದಿನನಿತ್ಯ ಅನಭವಿಸುತ್ತಿದ್ದಾರೆ ಎಂದು ಪ್ರತಿಭಟನೆಕಾರರು ದೂರಿದರು.
ಗಂಗಾವತಿ ತಾಲೂಕಿನ ಸರಕಾರಿ ಕಾಲೇಜ್ ಗಳಾದ ಎಂ. ಎನ್. ಎಂ ಕಾಲೇಜು, ಜ್ಯೂನಿಯರ್ ಕಾಲೇಜ್ ಗಳಿಗೆ ಅಗತ್ಯವಾದ ಮೂಲ ಸೌಲಭ್ಯಗಳಿಲ್ಲ, ಶುದ್ಧ ಕುಡಿಯುವ ನೀರು, ಶೌಚಾಲಯ, ಪಾಠದ ಕೊಠಡಿ, ಗ್ರಂಥಾಲಯ ಹಲವಾರು ಸಮಸ್ಯೆಗಳ ಮಧ್ಯೆ ಶಿಕ್ಷಣ ಪಡೆಯಬೇಕಾಗಿದೆ, 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ , ಶೂ, ಸಾಕ್ಸ್ ವಿತರಣೆಯಾಗಿಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೂಡಲೇ ಈ ಕೆಳಗಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಈ ವೇಳೆ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ತಾಲ್ಲೂಕು ಅಧ್ಯಕ್ಷ ಗ್ಯಾನೇಶ ಕಡಗದ, ತಾಲ್ಲೂಕು ಕಾರ್ಯದರ್ಶಿ ಶಿವಕುಮಾರ, ಉಪಾಧ್ಯಕ್ಷ ನಾಗರಾಜ.ಯು ತಾಲೂಕ ಮುಂಖಡರಾದ ಸೋಮನಾಥ, ಬಾಲಜಿ, ಶರೀಫ್ ಬಸಯ್ಯ, ರಾಜಭಕ್ಷಿ, ಸುನೀತಾ, ದುರುಗಮ್ಮ, ಸವಿತಾ, ರಾಜೇಶ್ವರಿ,ಶಾಂತಾ, ವೆಂಕಟೇಶ್, ಸುನೀಲ್, ಬಾರ್ಗವ, ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಬೇಡಿಕೆಗಳು
- ಕಳೆದ 4 ವರ್ಷಗಳಿಂದ 8 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೇ ಹಿಂದಿನ ಭಾ.ಜ.ಪ.ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು ಈ ವರ್ಷದಿಂದ ಸೈಕಲ್ ವಿತರಿಸಲು ಸರ್ಕಾರ ಕ್ರಮವಹಿಸಬೇಕು.
- ಗಂಗಾವತಿ ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಗೆ ಸಮರ್ಪಕ ಬಸ್ ವ್ಯವಸ್ಥೆ ಮಾಡಬೇಕು. ಬಸ್ ಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ಬಸ್ ಗಳು ಸಿಗುತ್ತಿಲ್ಲ.ಶಾಲಾ ಕಾಲೇಜ್ ಸಮಯಕ್ಕೆ ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಬೇಕು.
- ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ವಿದ್ಯಾರ್ಥಿಗಳು ಕುಳಿತ ಕೊಳ್ಳಲು ಡೆಸ್ಕ್ ಗಳು ಒದಗಿಸಬೇಕು,
- ಸ್ವಂತ ಕಟ್ಟಡಗಳು, ಈಗಾಗಲೇ ಇರುವ ಕಟ್ಟಡಗಳ ದುರಸ್ತಿ, ಗ್ರಂಥಾಲಯ ಕೊಠಡಿ, ಭೋಜನಾಲಯ ಕೊಠಡಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಕಂಪೌಂಡ್ ವ್ಯವಸ್ಥೆಯನ್ನು ಖಾತ್ರಿ ಪಡಿಸಬೇಕು, ಅಖಂಡ ಗಂಗಾವತಿ ತಾಲೂಕಿನ ಎಲ್ಲಾ ಗ್ರಾಮಗಳಗೆ ಕಾಲೇಜು ಸಮಯಕ್ಕೆ ಬಸ್ ಒದಗಿಸಿ
- ಹಾಸ್ಟೆಲ್‌ಗೆ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಸಬೇಕು. ಹಾಸ್ಟೆಲ್ ಆಯ್ಕೆ ಪಟ್ಟಿ ಬೇಗ ಪ್ರಕಟಸಬೇಕು ಎಲ್ಲಾ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಕೂಡಲೇ ಶೂ ಸಾಕ್ಸ್ ವಿತರಣೆ ಮಾಡಬೇಕು.
- ಆರ್.ಟಿ.ಇ ನಿಯಮಗಳನ್ನು ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಆದೇಶ ಮಾಡಬೇಕು.
- ಸರಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುತೇಕ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್, ನೋಟ್ ಬುಕ್ ಬಟ್ಟೆ ಮಾರಾಟ ಮಾಡುವಂತಹ ಶಾಲೆಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು.
- ನಗರದಲ್ಲಿ ಅನಧೀಕೃತವಾಗಿವಾಗಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಜರಿಗಿಸಬೇಕು.