ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗ ಕೊಡವದರಲ್ಲಿ ಸರ್ಕಾರಗಳು ವಿಫಲವಾಗಿವೆ

ವಿಜಯನಗರ :  ರಾಜ್ಯ ಮತ್ತು ಒಕ್ಕೂಟ ಸರಕಾರ ದೇಶದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉದೋಗ ಕಲ್ಪಿಸಿಲು ವಿಪುಲವಾಗಿವೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯ ರಾಜ್ಯ ಅಧ್ಯಕ್ಷ ಅಮರೇಶ ಕಡಗದ ಹೇಳಿದರು.

ಅವರು ಇಂದು ವಿಜಯನಗರದ ಶ್ರಮಿಕರ ಭವನದಲ್ಲಿ ಸಂಘಟನೆಯ ಅಖಿಲ ಭಾರತ ಸಮ್ಮೇಳನದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ರಾಜ್ಯ ಸರಕಾರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತದೆ, ಸರಕಾರಿ ಶಾಲಾ-ಕಾಲೇಜ್, ಹಾಸ್ಟೆಲ್ ಅಭಿವೃದ್ಧಿ ಮಾಡಿ ಅಂದರೆ ಪಾಲಕರಿಂದ ಎಸ್‌ಡಿಎಂಸಿ ಹೆಸರಲ್ಲಿ ಹಣ ವಸೂಲಿಗೆ ಮುಂದಾಗುತ್ತಿದೆ.  ಪದವಿ ವಿದ್ಯಾರ್ಥಿಗಳಿಗೆ ಜಾರಿ ಮಾಡಿರಿವು ಹೋಸ ರಾಷ್ಟ್ರೀಯ ಶಿಕ್ಷಣ ನೀತಿ ಅರಾಜಕತೆ ಸೃಷ್ಟಿಸಿದೆ.  ಪದವಿ ಪರೀಕ್ಷೆ ಬರೆದು ಸುಮಾರು ಒಂದು ವರ್ಷ ಆದರು ಪದವಿ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಮಾಡಿಲ್ಲ, ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷೆ ಶುಲ್ಕವನ್ನು ಹೆಚ್ಚಿಸುವ ಸರಕಾರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡವುದನ್ನು ಮರೆತುಬಿಟ್ಟಿದೆ, ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ ಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಕೊಡುತ್ತಿಲ್ಲ,  ಸ್ವಾತಂತ್ರ್ಯ ಬಂದು 75 ವರ್ಷ ಆದರೂ ದೇಶದಲ್ಲಿ ಪ್ರಾಥಮಿಕ ಶಿಕ್ಷಣದಿಂದ ದೂರ ಉಳಿದವರು ಸಂಖ್ಯೆ ಸುಮಾರು ಹತ್ತು ಲಕ್ಷ ಇದೆ ಎಂದರು.

ಎಸ್‌ಎಫ್‌ಐ “ಸರ್ವರಿಗೂ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಿಗಾಗಿ” ನಿರಂತರ ಚಳುವಳಿಯನ್ನು ಸಂಘಟಿಸುತ್ತ ಬರುತ್ತಿದೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆಯನ್ನು ಗಟ್ಟಿಗೊಳಿಸುವುದರ ಜೊತೆಗೆ ಇಂದು ಶಿಕ್ಷಣ ಕ್ಷೇತ್ರದ ಖಾಸಗೀಕರಣ, ವ್ಯಾಪಾರೀಕರಣ, ಭ್ರಷ್ಟಾಚಾರ, ಖಾಸಗಿ – ವಿದೇಶಿ ವಿಶ್ವವಿದ್ಯಾಲಯಗಳು ದೇಶಕ್ಕೆ ಆಗಮಿಸುತ್ತಿರುವುದನ್ನು ವಿರೋದಿಸಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಚಳುವಳಿಯನ್ನು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರವ್ಯಾಪಿಯಾಗಿ ಕಾರ್ಯಕ್ರಮಗಳನ್ನು ಮಾಡುತ್ತಿವೆ ಎಂದರು.

ಕಳೆದ 5೦ ವರ್ಷಗಳಿಂದ ಶಿಕ್ಷಣದ ಉಳಿವಿಗಾಗಿ, ವಿದ್ಯಾರ್ಥಿಗಳ ಏಳ್ಗೆಗಾಗಿ ನಿರಂತರ ಹೋರಾಟ, ಕಾರ್ಯಕ್ರಮ, ಸಂವಾದ, ವಿಚಾರ ಸಂಕಿರಣ ಕಾರ್ಯಕ್ರಮಗಳನ್ನು ನಡೆಸುತ್ತಾ ವಿದ್ಯಾರ್ಥಿಗಳ ಆಶಾಕಿರಣವಾಗಿ ಕೆಲಸ ಮಾಡುತ್ತಿರುವ ಎಸ್‌ಎಫ್‌ಐ ಸಂಘಟನೆಯ 17ನೇ ರಾಷ್ಟ್ರ ಸಮ್ಮೇಳನ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ಡಿಸೆಂಬರ್ 13 ರಿಂದ ನವೆಂಬರ್ 16ರವರೆಗೆ ನಡೆಯಲಿದೆ. “ ಎಲ್ಲರಿಗೂ ಶಿಕ್ಷಣ, ಎಲ್ಲರಿಗೂ ಉದ್ಯೋಗ, ಎಲ್ಲರೂ ಒಂದು ” ಎಂಬ ಪ್ರಮುಖ ಘೋಷಣೆಯಡಿಯಲ್ಲಿ ರಾಷ್ಟ್ರ ಸಮ್ಮೇಳನ ನಡೆಯುತ್ತಿದೆ. ಈ 17 ನೇ ರಾಷ್ಟ್ರ ಸಮ್ಮೇಳನವನ್ನು ತ್ರಿಪುರ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಮಾಣಿಕ್‌ ಸರ್ಕಾರ್‌ ಉದ್ಘಾಟನೆ ಮಾಡಲಿದ್ದು, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಶಿಕ್ಷಣ ತಜ್ಞರು, ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು ದೇಶದ ವಿವಿಧ ಭಾಗಗಳಿಂದ ಒಂದು ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿ ಚಳುವಳಿಯಲ್ಲಿರುವ, ನಾಯಕರು ಪಾಲ್ಗೊಳ್ಳುತ್ತಿದ್ದು ಶಿಕ್ಷಣ ಮತ್ತು ಉದ್ಯೋಗ ಸೇರಿದಂತೆ ಹಲವಾರು ಕ್ಷೇತ್ರಗಳ ಕುರಿತು, ರಾಷ್ಟ್ರವನ್ನು ತಲ್ಲಣಗೊಳಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಠಾಚಾರ, ನಿರುದ್ಯೋಗ, ಬಡತನ ಸೇರಿದಂತೆ ಇನ್ನು ಹಲವಾರು ವಿಷಯಗಳ ಕುರಿತು ವಿಚಾರ ಸಂಕಿರಣಗಳು, ಚರ್ಚಾ ಗೋಷ್ಟಿಗಳು ನಡಿಲಿವೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ, ಶಿವರಡ್ಡಿ, ಪ್ರಮುಖರಾದ ಪವನ್,ಮಾರೇಶ,ಅನೀಲ್ ತಿಪ್ಪಮ್ಮ,ಇತರರು ಇದ್ದರು.

Donate Janashakthi Media

Leave a Reply

Your email address will not be published. Required fields are marked *