ಗಂಗಾವತಿ : ಎಸ್.ಸಿ, ಎಸ್.ಟಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಗಂಗಾವತಿ ನಗರದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಾಸಕರಿಗೆ ಮನವಿ ಪತ್ರ ನೀಡಿದರು. ಈ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಪಟ್ಟು ಹಿಡಿದರು. ಅಧಿಕಾರಿಗಳ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡುವ ಭರವಸೆಯನ್ನು ಶಾಸಕರು ನೀಡಿದರು.
ಪ್ರತಿಭಟನೆ ಉದ್ದೇಶಿಸಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಕಣಕ್ಕೆ ಹೋಗಲು ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಕಳೆದ 2 ವರ್ಷಗಳಿಂದ 10ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ನೂರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲ್ಲಿಯವರೆಗೆ ಬಂದಿರುವುದಿಲ್ಲ, ತಾಲೂಕಿನಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆಯಾಗಿದ್ದು, ಇನ್ನು ಕೆಲವು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಇಲ್ಲಿಯ ವರೆಗೆ ಬಿಡುಗಡೆಯಾಗಿರುವುದಿಲ್ಲ ಎಂದು ಆರೋಪಿಸಿದರು.
ರಾಜ್ಯದ ಎಸ್.ಸಿ, ಎಸ್.ಟಿ, ಸಮುದಾಯದ ವಿದ್ಯಾರ್ಥಿಗಳಿಗೆ
ಎಸ್.ಎಸ್.ಎಲ್.ಸಿ, ಪಿ.ಯು.ಸಿ,ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣವಾದ ವಿದ್ಯಾರ್ಥಿಗಳಿಗೆ ರೂ. 15000 ರಿಂದ 35000 ಗಳ ವರೆಗೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲು ಸಮಾಜ ಕಲ್ಯಾಣ ಇಲಾಖೆಯಿಂದ ಕೊಡಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಗೆ ಇದು ಸರಿಯಾಗಿ ದೊರಕುತ್ತಿಲ್ಲ, ಇದರಿಂದಾಗಿ ಉನ್ನತ ಶಿಕ್ಷಣ ಕಲಿಯುವ ಈ ಸಮುದಾಯದ ವಿದ್ಯಾರ್ಥಿಗಳಿಗರ ತೀವ್ರ ಸಂಕಷ್ಟ ಎದರುಗುತ್ತಿದೆ ಎಂದರು.
ಈಗಾಗಲೇ ಆ ವಿದ್ಯಾರ್ಥಿಗಳು ದ್ವಿತಿಯ ಪಿಯುಸಿ, ಓದುತ್ತಿದ್ದು, ದ್ವಿತಿಯ ಪಿ.ಯು.ಸಿ, ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ದ್ವಿತೀಯ ಪಿ.ಯು.ಸಿ ಮುಗಿಯುವ ಹಂತಕ್ಕೆ ಬಂದರು, 10ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡುವಲ್ಲಿ ವಿಳಂಬವಾಗಿರುತ್ತದೆ. ಈ ಕುರಿತು ನಮ್ಮ ಸಂಘಟನೆಯು ಸಮಾಜ ಕಲ್ಯಾಣ, ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಮೌಖಿಕವಾಗಿ ಮಾತನಾಡಿದಾಗ ಸರ್ಕಾರದಿಂದ ಹಣ ಬಂದಿರುವುದಿಲ್ಲ, ಸರ್ಕಾರದಿಂದ ಹಣ ಬಿಡುಗಡೆಯಾಗಬೇಕಾಗಿದೆ ಎಂದು ಹೇಳಿದರು, ಆದ್ದರಿಂದ ತಾವುಗಳು ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳ ಜೊತೆಯಲ್ಲಿ ಮಾತನಾಡಿ ಹಣ ಬಿಡುಗಡೆ ಮಾಡಿ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಮೌನೇಶ, ಲಕ್ಷ್ಮಣ್, ರಾಜು, ಹುಲಗೇಶ, ಚಂದ್ರಶೇಖರ, ಸುದೀಪ್, ವಿರೇಶ, ಅಂಬ್ರೇಶ, ಮಹೇಶ, ಕಂಠೇಶ, ಲಕ್ಷ್ಮಣ್ ಇತರರು ಇದ್ದರು.