NTA ರದ್ದುಗೊಳಿಸಲು ಆಗ್ರಹ
ಹಾವೇರಿ: ‘ಪ್ರಶ್ನೆಪತ್ರಿಕೆ ಸೋರಿಕೆ’ ಮೇ 3 ರಂದು ನಡೆದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಆಡುತ್ತಿರುವ NTA ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಮೈಲಾರ ಮಹಾದೇವಪ್ಪ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆಗೆಗಾಗಿ, ನೀಟ್ ಪರೀಕ್ಷೆ ರದ್ದುಗೊಳಿಸಲು, NTA ಸಂಸ್ಥೆಯ ಮೇಲೆ ಕ್ರಮಕೈಗೊಳ್ಳವಂತೆ ಫಲಕಗಳನ್ನು ಪ್ರದರ್ಶನ ಮಾಡಿದರು. ಪ್ರಶ್ನೆಪತ್ರಿಕೆ
ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆಯು ಮೇ 3 ರಂದು ಪರೀಕ್ಷೆ ನಡೆಸಿದ್ದು, ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 (NEET- UG 2026) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ನ್ಯಾಷನಲ್ ಟೆಸ್ಟ್ ಏಜೆನ್ಸಿ (ಎನ್.ಟಿ.ಎ) ಪರೀಕ್ಷೆಯ ನಡವಳಿಕೆಯ ಬಗ್ಗೆ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ. ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಶ್ನೆಪತ್ರಿಕೆ
ವರ್ಷದಿಂದ ವರ್ಷಕ್ಕೆ, ಪರೀಕ್ಷೆಯಿಂದ ಪರೀಕ್ಷೆಗೆ, ನ್ಯಾಷನಲ್ ಟೆಸ್ಟ್ ಏಜೆನ್ಸಿ (ಎನ್.ಟಿ.ಎ) ಪರೀಕ್ಷೆಗಳನ್ನು ನಡೆಸುವಲ್ಲಿ ತನ್ನ ಆದಾಯವನ್ನು ಸಾಬೀತುಪಡಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳು ಎದುರಿಸಬೇಕಾದ ಮಾನಸಿಕ ಒತ್ತಡ ಮತ್ತು ತೊಂದರೆಗಳಿಗೆ ಎನ್.ಡಿ.ಎ ಸರ್ಕಾರವೇ ಜವಾಬ್ದಾರರಾಗಿರಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸಿದೆ ಎಂದು ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಹೇಳಿಕೆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಪ್ರಶ್ನೆಪತ್ರಿಕೆ
ಇದನ್ನೂ ಓದಿ: ವಿದ್ಯಾರ್ಥಿಗಳ ಕನಸ್ಸನ್ನು ವ್ಯಾಪಾರವಾಗಿಸಿರುವ “ಎಗ್ಜಾಮ್ ಮಾಫಿಯಾ”
ವರದಿಗಳ ಪ್ರಕಾರ, ಒಟ್ಟು 720 ಅಂಕಗಳಲ್ಲಿ ಸುಮಾರು 600 ಅಂಕಗಳ ಪ್ರಶ್ನೆಗಳು ಸೋರಿಕೆಯಾಗಿದ್ದು, ಇದು ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆ ತಂದಿದೆ. ಪರೀಕ್ಷೆಯ 180 ಪ್ರಶ್ನೆಗಳಲ್ಲಿ ಸುಮಾರು 15 ಪ್ರಶ್ನೆಗಳನ್ನು ಸಂಭಾವ್ಯ ಪ್ರಶ್ನೆ ಪತ್ರಿಕೆಯ ಹೆಸರಿನಲ್ಲಿ ಮೊದಲೇ ವಿತರಿಸಲಾಗಿತ್ತು ಮತ್ತು ರಸಾಯನಶಾಸ್ತ್ರ (Chemistry) ವಿಭಾಗದ ಸುಮಾರು 120 ಪ್ರಶ್ನೆಗಳು ಇದ್ದಕ್ಕಿದ್ದಂತೆ ಸೋರಿಕೆಯಾಗಿವೆ ಎಂದು ವರದಿಯಾಗಿದೆ. ಪ್ರಶ್ನೆಪತ್ರಿಕೆ
ರಾಜಸ್ಥಾನ ಸೇರಿದಂತೆ ವಿವಿಧೆಡೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ನಡೆದ ಆರೋಪಗಳು ಕೇಳಿಬರುತ್ತಿವೆ ಅಕ್ರಮ ನಡೆದ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕ್ರಮವನ್ನು ತೆಗೆದುಕೊಳ್ಳಲಾಗದೆ. ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ ಎಳೆದರಂತೆ ಹಾಗೆ ಆಗಿದೆ. ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ. ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಆಧಾರಿತ ಪ್ರವೇಶ ಪರೀಕ್ಷೆ ಪದ್ಧತಿಯನ್ನು ಬದಲಾಯಿಸಲು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಈಗ ನೀಟ್-ಯುಜಿ ಗೆ ಸಂಬಂಧಿಸಿದಂತೆಯೂ ಇದೇ ಆರೋಪ ಸಾಬೀತಾಗಿದೆ.
ಎನ್.ಟಿ.ಎ ಪ್ರಾರಂಭವಾದಾಗಿನಿಂದ ಪ್ರಮುಖ ಪರೀಕ್ಷೆಗಳ ಗಂಭೀರ ಅವ್ಯವಹಾರಗಳು ನಡೆಯುತ್ತಿದೆ, ಇಂತಹ ಸಂಸ್ಥೆಯು ಪರೀಕ್ಷೆಯನ್ನು ನಡೆಸಲು ಅಸಮರ್ಥವಾಗಿದೆ ಎಂದು ಮತ್ತೊಮ್ಮೆ ಸಾಬೀತಾಗಿದೆ . NET ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಸ್ಪಕ್ಷಪಾತ ತನಿಖೆಗೆ ಈ ಪ್ರಕರಣವನ್ನು ಸುಪ್ರೀಂ ಕೋರ್ಟಿನ ನ್ಯಾಯಾಧಿಶರ ಸಮಿತಿಯನ್ನು ರಚನೆ ಮಾಡಿ ತನಿಖೆ ಮಾಡಬೇಕು.
ಈಗೆ ಹಲವಾರು ಪರೀಕ್ಷೆಗಳನ್ನು ನಡೆಸಲು NTA ವಿಫಲವಾಗಿದೆ ಮತ್ತು ಭ್ರಷ್ಟಾಚಾರವಾಗಿರುವುದು ಮತ್ತು ಪತ್ರಿಕೆ ಸೋರಿಕೆಯಾಗಿರುವುದು ಸ್ಪಷ್ಟವಾಗಿದೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ, ಆದರಿಂದ NTA ರದ್ದು ಪಡಿಸಬೇಕೆಂದು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಯನ್ನು ಭಾರತ ಸರ್ಕಾರದ ಶಿಕ್ಷಣ ಸಚಿವರು ನೈತಿಕ ಹೊಣೆ ಒತ್ತು ರಾಜೀನಾಮೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆಪತ್ರಿಕೆ
ಎಸ್ಎಫ್ಐ ಮುಖಂಡ ಅರುಣ್ ನಗವತ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ತಳಸಮುದಾಯದ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಸುರಿಯುವ ಶ್ರೀಮಂತ ,ಉನ್ನತ ಶೈಕ್ಷಣಿಕ ಸೌಲಭ್ಯವುಳ್ಳ ಅಭ್ಯರ್ಥಿಗಳ ಜೊತೆಗೆ ಪೈಪೋಟಿ ನಡೆಸಿ ಸೀಟು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಪ್ರತಿ ವರ್ಷಗಳಲ್ಲಿ ನೀಟ್ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದ ಸುಮಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಗುರಿಯಾಗಿದ್ದಾರೆ. ಒಬ್ಬ ವಿದ್ಯಾರ್ಥಿಗೆ ನೀಟ್ ಪರೀಕ್ಷೆಯ ಕೋಚಿಂಗ್ ಗೆ ಒಂದು ಲಕ್ಷದಿಂದ ಹತ್ತು ಲಕ್ಷದವರೆಗೆ ಹಣ ವಸೂಲಿ ನಡೆಯುತ್ತಿದೆ ಇದರಿಂದ ಹಣ ಬರಿಸಲು ಸಾಧ್ಯವಿಲ್ಲದ ಬಡಕುಟುಂಬದ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆಯಲು ವಂಚಿತರಾಗುತ್ತಿದ್ದಾರೆ. ಆದ್ದರಿಂದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸದಿದ್ದರೆ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳು ಕಿತ್ತುಕೊಂಡಂತೆ ಆಗುತ್ತಿದೆ.
ಈ ಘಟನೆಗೆ ಸಂಬಂದಿಸಿದಂತೆ ಕೂಡಲೇ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಮಾಡಬೇಕೆಂದು, ಎನ್ಟಿಎಯನ್ನು ರದ್ದುಪಡಿಸಲು ಮತ್ತು ಇಲ್ಲಿಯವರೆಗಿನ ಅದರ ಎಲ್ಲಾ ಹಗರಣಗಳನ್ನು ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಮುಖಂಡ ಕೃಷ್ಣಾ ನಾಯ್ಕ, ರಘು ಅಂಗಡಿ, ಶಶಿಕಲಾ ದೊಡ್ಡಮನಿ, ನಂದ ಹೆಚ್ಚ್, ಸಿಂಚನ ಮಲ್ಲಣ್ಣನವರ, ಶಶಿಕಲಾ ಎಮ್, ಸರಸ್ವತಿ ತಳವಾರ, ಲಲಿತಾ ಪೂಜಾರ್, ತೇಜಸ್ವಿನಿ ಮಳಾಪುರ, ಭಾಗ್ಯಶ್ರೀ ಪಾಟೀಲ್, ಉಮ್ಮುಲ್ವರ ತಂಡೂರ್, ದೀಕ್ಷಾ ಬಂಕಾಪುರ, ಮಧು ವರದಿ, ಸೃಷ್ಟಿ ದೇವಗಿರಿ, ಫರ್ಹಾನ್ ಧಾರದವರ್, ಸುನಿಲ್ ಟಿ, ಮನೋಜ ಚೌಡಮ್ಮನವರ್, ನಂಜುಂಡಿ ಸುಡಂಬಿ, ಜೈಶಂಕರ್, ಹನುಮಂತ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ನೋಡಿ: ಕರಾವಳಿ ಪ್ರವಾಸೋದ್ಯಮ : ಸ್ಥಳೀಯರ ಬದುಕು ಉಳಿಯಬೇಕೇ ಹೊರತು ಕಾರ್ಪೊರೇಟ್ ಲಾಭಕ್ಕಲ್ಲ – ಮುನೀರ್ ಕಾಟಿಪಳ್ಳ
