ಬೆಂಗಳೂರು: ಶಾಲೆ , ಕಾಲೇಜು ಮತ್ತು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ತಡೆಗಟ್ಟುವಂತೆ ಒತ್ತಾಯಿಸಿ ಜುಲೈ 23 ರಂದು ಎಸ್ ಎಪ್ ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ
ಈ ಪ್ರತಿಭಟನೆಯಲ್ಲಿ ಎಸ್ ಎಪ್ ಐ ರಾಜ್ಯಧಾಕ್ಷ ಶಿವಪ್ಪ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾನಿಯದ ಕ್ಯಾಂಪಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಶಾಲಾ ಶಿಕ್ಷಕರೆ ಕಾಲೇಜಿನ ಪ್ರಾದ್ಯಪಕರು ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳು ದಾಖಲೆಯಾಗುತ್ತಿವೆ ಆದರೆ ಆರೋಪಿ ಅಪರಾಧ ಮಾಡಿದ್ದಾನೆ ಎಂದು ನ್ಯಾಯಾಲಯಗಳಲ್ಲಿ ನಿರೂಪಿಸಲಾಗದೆ ಅಪರಾಧಿಗಳು ಬಿಡುಗಡೆಯಾಗುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನಂತರ ಪೊಲೀಸ್ ಇಲಾಖೆ ಸರಿಯಾದ ತನಿಖೆ ನಡೆಸದೆ ಆರೋಪಿಗಳಿಗೆ ಅನುಕೂಲವಾಗುವಂತೆ ತನಿಖಾ ವರದಿ ನೀಡುತ್ತಿದ್ದಾರೆ. ಇದರಿಂದ ಅಪರಾಧಿಗಳು ಕಾನೂನಿನ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಬಲಿಪಶುಗಳು ಮತ್ತಷ್ಟು ದೌರ್ಜನ್ಯ ಮತ್ತು ಶೋಷಣೆಗೆ ಒಳಗಾಗುತ್ತಿದ್ದಾರೆ. ಆರೋಪಿಗಳು ಮತ್ತಷ್ಟು ಅಪರಾಧಗಳನ್ನು ಮಾಡುತ್ತಿದ್ದಾರೆ. ಎಂದು ಪ್ರಶ್ನಿಸಿ ಶಾಲೆ,ಕಾಲೇಜು,ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿನಿಯರಿಗೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಗಳನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗುತ್ತಿವೆ. ಎಲ್ಲಾ ಶಾಲೆ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಬೇಕು. ಕ್ಯಾಂಪಸ್ ಗಳಲ್ಲಿ CCTV ಕ್ಯಾಮರಾ ಅಳವಡಿಸಬೇಕು. ಸರಿಯಾದ ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು. ಎಂದು ಒತ್ತಾಯ ಮಾಡುತ್ತೇವೆ. NCRB ವರದಿಯ ಪ್ರಕಾರ ಕೇಂದ್ರೀಯ ವಿಶ್ವ ವಿದ್ಯಾಲಯಗಳಲ್ಲಿ ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಮಾಡಿದ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ 2019 ರಲ್ಲಿ 93, 2020 ರಲ್ಲಿ 31, 2021 ರಲ್ಲಿ 38, 2022 ರಲ್ಲಿ 71, 2023 ರಲ್ಲಿ 56 ಪ್ರಕರಣಗಳು ವರದಿಯಾಗಿವೆ. IITs,IIITs,IIMs,NITs ಸಂಸ್ಥೆಗಳಲ್ಲಿ 2023 ರಲ್ಲಿ 127 ವಿದ್ಯಾರ್ಥಿನಿಯರಿಗೆ ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪ್ರಕರಣಗಳು ವರದಿಯಾಗಿವೆ ಎಂದು ಎಸ್ ಎಪ್ ಐ ರಾಜ್ಯ ಜಂಟಿ ಕಾಯದರ್ಶಿ ಸುಜಾತಾ ವೈ ಅಗ್ರಹಿಸಿದರು.
ಇದನ್ನೂ ಓದಿ : ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ – ಅರಿವು ಭಾರತ

ಮೋದಿ ಸರ್ಕಾರದ ಪ್ರಸ್ತುತ ಆಡಳಿತದಲ್ಲಿ ದೇಶಾದ್ಯಂತ ಕ್ಯಾಂಪಸ್‌ಗಳಲ್ಲಿ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯಗಳು ಸಾಮಾನ್ಯ ಸಂಗತಿಗಳಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಒಂದು ಕಾಲೇಜಿನ ಇಬ್ಬರು ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪರಾಧಿಗಳನ್ನು ಈಗಾಗಲೇ ಬಂದಿಸಲಾಗಿದೆ. ಆದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಸರಿಯಾದ ತನಿಖೆಯನ್ನು ಮಾಡಬೇಕಿದೆ. ಸರಿಯಾದ ತನಿಖೆ ನಡೆಸದಿದ್ದರೆ ಆರೋಪಿಗಳು ತಪ್ಪಿಸಿ ಕೊಳ್ಳುವ ಸಾಧ್ಯತೆ ಇರುತ್ತದೆ. ಆದರಿಂದ ಆರೋಪಿಗಳಿಗೆ ಶಿಕ್ಷೆಯಾಗುವಂತೆ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ ಒತ್ತಾಯಿಸಿದರು.
ಒಡಿಶಾದ ಫಕೀರ್ ಮೋಹನ್ ಕಾಲೇಜು ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳದಿಂದ ಪ್ರಾಂಶುಪಾಲರ ಕಚೇರಿಯ ಹೊರಗೆ ವಿದ್ಯಾರ್ಥಿನಿ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡದ್ದಾಳೆ. ತಾನು ಸಾಯುವ ತಿಂಗಳುಗಳ ಮೊದಲು ತನ್ನ ಸ್ನೇಹಿತರಲ್ಲಿ ತಾನು ಅನುಭವಿಸುತ್ತಿದ್ದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಳು. ಜೂನ್ 25 ರಂದು ಕೋಲ್ಕತ್ತಾದ ಕಸ್ಬಾ ಪ್ರದೇಶದ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ 24 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ಮಾಜಿ ವಿದ್ಯಾರ್ಥಿ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರು ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಅತ್ಯಾಚಾರ ಮಾಡಲಾಗಿದೆ. ಜುಲೈ 8 ರಂದು ಮಹಾರಾಷ್ಟ್ರದ ಥಾಣೆಯಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು, ಸಿಬ್ಬಂದಿಗಳು ಸೇರಿಕೊಂಡು ವಿದ್ಯಾರ್ಥಿನಿಯರು ಋತುಮತಿಯಾಗಿದ್ದಾರೆಯೇ ಎಂದು ಪರೀಕ್ಷಿಸಲು ಅವರನ್ನು ವಿವಸ್ತ್ರಗೊಳಿಸಲಾಗಿದೆ. ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಫೆಬ್ರವರಿಯಲ್ಲಿ ಆಡಳಿತ ಮಂಡಳಿಯವರು ಕಿರುಕುಳ ನೀಡುತ್ತಿದ್ದಾರೆ ಎಂದು ತಮ್ಮ ಪೋಷಕರಿಗೆ ತಿಳಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಪ್ರಕರಣ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಯಾಂಪಸ್‌ಗಳಲ್ಲಿ GSCASH ( Gender Sensitization Committee against Sexual Harassment) ಸಮಿತಿಯನ್ನು ವಿಶ್ವ ವಿದ್ಯಾಲಯಗಳಲ್ಲಿ ಕಡ್ಡಾಯಗೊಳಿಸಬೇಕು,ಸರ್ಕಾರಿ ಶಾಲಾ / ಕಾಲೇಜುಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ವಿರೋಧಿ ಸಮಿತಿಯನ್ನು ರಚನೆ ಮಾಡಬೇಕು,ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಕ್ಕೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಬೇಕು,ವಿದ್ಯಾರ್ಥಿನಿಯರ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳಲ್ಲಿ ಸರಿಯಾದ ತನಿಖೆ ಮಾಡಿ ಸೂಕ್ತ ಸಾಕ್ಷಿ ಗಳನ್ನು ನ್ಯಾಯಲಯಕ್ಕೆ ಸಲ್ಲಿಸಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ಮಾಡಬೇಕುವಿದ್ಯಾರ್ಥಿನಿಯರಿಗೆ ಲೈಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು,ಶಾಲೆಗಳು/ ಕಾಲೇಜುಗಳು / ವಿಶ್ವವಿದ್ಯಾಲಯದ ಕ್ಯಾಂಪಸ್ ಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ CC TV ಅಳವಡಿಸಬೇಕು. ಮತ್ತು ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು.ನಿವೃತ್ತ ಸರ್ವೋಚ್ಚ ನ್ಯಾಯಾಲಯ ಮುಖ್ಯನ್ಯಾಯಮೂರ್ತಿಜೆ ಎಸ್ ವರ್ಮಾ ಸಮಿತಿಯ ಶಿಫಾರಸ್ಸನ್ನು ಜಾರಿಗೊಳಿಸಬೇಕು. ಎಂದು ಹಲವು ವಿವಿದ ಬೇಡಿಕೆಗಳೊಂದಿಗೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಎಸ್ ಎಪ್ ಐ ರಾಜ್ಯ ಉಪಾಧ್ಯಕ್ಷ ದೊಡ್ಡ ಬಸವರಾಜ, ಬಸವರಾಜ ಬೋವಿ, ಗಣೇಶ ರಾಥೋಡ, ಮುಖಂಡರಾದ ಅರ್ಪೀತಾ ಗ್ರೇಸಿ, ಜಿಲ್ಲಾ ಮುಖಂಡರಾದ ವೆಂಕಟೆಶ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಇದನ್ನೂ ನೋಡಿ : ಖಾಸಗಿ ಶಾಲೆಗಳು ಪಡೆಯುತ್ತಿರುವುದು ಶುಲ್ಕವೋ! ವಸೂಲಿಯೋ!!? Janashakthi Media
