ಗಂಗಾವತಿ: ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ತಾಲ್ಲೂಕು ಪಂಚಾಯತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು. ವೃತ್ತಿಪರ
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಶಿವುಕುಮಾರ ಈಚನಾಳ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ ವಿದ್ಯಾರ್ಥಿಗಳು ಹಾಸ್ಟೆಲ್ ಕೋರಿ ಅರ್ಜೆ ಹಾಕಿದ್ದಾರೆ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬವಾಗಿದ್ದು, ಇದರಿಂದಾಗಿ ಅದೆಷ್ಟೋ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸದಿಂದ ದೂರ ಉಳಿದಿದ್ದಾರೆ ಎಂದು ಒತ್ತಾಯಿಸಿದರು,
ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ ನಗರದಲ್ಲಿ ಓದುತ್ತಿರುವ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದು ಕಾಲೇಜು ಗಳು ಆರಂಭವಾಗಿ 3-4 ತಿಂಗಳು ಕಳೆದರು ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಗಳು ಇರದೇ ಇಲ್ಲದಿರುವುದು ಜೊತೆಗೆ ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡದೇ ಇರುವುದರಿಂದ ಪ್ರತಿ ನಿತ್ಯ ವಿದ್ಯಾರ್ಥಿಗಳು ತರಗತಿಯಿಂದ ವಂಚಿತರಾಗುತ್ತಿದ್ದಾರೆ ಶಾಸಕರಿಗೆ ಮತ್ತು ಎಲ್ಲಾ ಸಂಬಂದಿಸಿದ ಅಧಿಕಾರಿಗಳಿಗೆ ಎಚ್ಚರಿಸಿದರು,
ಇದನ್ನೂ ಓದಿ: ಹಣ ದುರ್ಬಳಕೆ: ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ
ತಾಲೂಕ ಅಧ್ಯಕ್ಷ ನಾಗರಾಜ್.ಯು ಮಾತನಾಡಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ಥಳದ ಕೊರತೆ ಇದೆ ಎಂಬ ಕುಂಟು ನೆಪವೊಡ್ಡಿ ವೃತ್ತಿಪರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್. ಎಫ್. ಐ ) ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಬಸಯ್ಯ ಹಿರೇಮಠ್ ಮಾತನಾಡಿ ಈ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಶೀಘ್ರದಲ್ಲೇ ವೃತ್ತಿಪರ ವಿದ್ಯಾರ್ಥಿಗಳ ಹಾಸ್ಟಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು ಮತ್ತು ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಿಸಬೇಕು ಇಲ್ಲದಿದ್ದಲ್ಲಿ ತಾಲೂಕ ಕಚೇರಿಗಳನ್ನು ಮುತ್ತಿಗೆಹಾಕಲಾಗುವುದು ಎಂದು ಈ ಮೂಲಕ ಭಾರತ ವಿದ್ಯಾರ್ಥಿ ಫೆಡರೇಶನ್ ( ಎಸ್. ಎಫ್. ಐ ) ಗಂಗಾವತಿ ತಾಲೂಕ ಸಮಿತಿಯ ಎಚ್ಚರಿಕೆಯ ಮನವಿಯನ್ನು ಸಲ್ಲಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸದಸ್ಯ ಶರಣಬಸವ ಮಾತನಾಡಿದರು, ಮುಖಂಡರಾದ ದೊಡ್ಡಬಸವ, ಮಂಜುನಾಥ್, ಶಿವು, ಕೌಶಿಕ್,ರಾಜೇಶ್ವರಿ,ಚೈತ್ರಾ ಸಜ್ಜನ್, ಪರ್ವೀನ್,ಕಾವೇರಿ, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ನೋಡಿ: ದಣಿವರಿಯದೆ ದುಡಿಯುವ ಮಹಿಳೆಗೆ ಕನಿಷ್ಠ ಕೂಲಿ ಯಾಕಿಲ್ಲ? Janashakthi Media
