ಹುಣಸೂರು : ಶ್ರೀ ಡಿ ದೇವರಾಜ್ ಅರಸು ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಮತ್ತು ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡುವಂತೆ ಮತ್ತು ಪರೀಕ್ಷಾ ಶುಲ್ಕ ಪಾವತಿ ದಿನಾಂಕ ಮತ್ತು ಪರೀಕ್ಷೆಯನ್ನು ಮುಂದೂಡುವಂತೆ ಮತ್ತು ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕ ಕಡಿಮೆ ಮಾಡುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ( SFI ) ನೇತೃತ್ವದಲ್ಲಿ ಶ್ರೀ ಡಿ ದೇವರಾಜ ಅರಸು ಕಾಲೇಜು ಬಳಿ ಮತ್ತು ಮಹಿಳಾ ಪ್ರಥಮ ದರ್ಜೆ ಕಾಲೇಜು ಮುಂದೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಯಿತು. ಹುಣಸೂರು
ಕಾಲೇಜುಗಳ ಮುಂದೆ SFI ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಸ್ಕರಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಡಲೇ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು,ಹೆಚ್ಚಿಸಿರುವ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು. ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಮತ್ತು ಪರೀಕ್ಷಾ ಶುಲ್ಕ ಪಾವತಿ ದಿನಾಂಕ ಮತ್ತು ಪರೀಕ್ಷೆಯ ದಿನಾಂಕವನ್ನು ಮುಂದೂಡುವಂತೆ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಹುಣಸೂರು
ಇದನ್ನೂ ಓದಿ : ಧರ್ಮದ್ವೇಷದ ಕೋಮುದಂಗೆಗಳು ಮತ್ತು ಅವುಗಳಿಗೆ ಪರಿಹಾರ
ಈ ಸಂದರ್ಭದಲ್ಲಿ SFI ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಟಿ ಎಸ್ ಮಾತನಾಡಿ ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 3 ತಿಂಗಳು ಕಳೆದಿದೆ. ರಾಜ್ಯದಲ್ಲಿರುವ ಬಹುತೇಕ ಸರ್ಕಾರಿ ಪದವಿ ಕಾಲೇಜುಗಲ್ಲಿ 70% ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಕಾಲೇಜುಗಳು ಪ್ರಾರಂಭವಾಗಿ 3 ತಿಂಗಳು ಕಳೆದರು ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 11,000 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇಲ್ಲಿಯ ತನಕ ಅತಿಥಿ ಉಪನ್ಯಾಸಕ ನೇಮಕಾತಿ ಆಗಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಪಠ್ಯ ಕ್ರಮ ಮುಗಿದಿಲ್ಲ ಮತ್ತು ಹಲವು ಕಾಲೇಜುಗಳಲ್ಲಿ ಕೆಲವು ವಿಷಯಗಗಳಲ್ಲಿ ಪಾಠಗಳೇ ಪ್ರಾರಂಭವಾಗಿಲ್ಲ ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಮೈಸೂರು ವಿ ವಿ ಕಳೆದ 24 ನೇ ದಿನಾಂಕದಂದು ಅಧಿಸೂಚನೆಯನ್ನು ಹೊರಡಿಸಿ ಪರೀಕ್ಷಾ ಶುಲ್ಕವನ್ನು 02-10-2025 ರ ಒಳಗೆ ಪಾವತಿ ಮಾಡುವಂತೆ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ ಮತ್ತು ಮುಖ್ಯ ಪರೀಕ್ಷೆಯನ್ನು ಅಕ್ಟೋಬರ್ ಅಲ್ಲಿ ನಡೆಸುವುದಾಗಿ ತಿಳಿಸಿದೆ ಎಂದರು.
ಹಲವು ಕಾಲೇಜುಗಲ್ಲಿ ಪಾಠಗಳಾಗದೆ ಆಂತರಿಕ ಪರೀಕ್ಷೆಗಳನ್ನು ನಡೆಸಲು ಮುಂದಾಗುತ್ತಿವೆ ಇದು ವಿದ್ಯಾರ್ಥಿಗಳ ಆರೋಗ್ಯ ಮೇಲೆ ಮತ್ತು ಶಿಕ್ಷಣದ ಮೇಲೆ ವ್ಯತೀರಿಕ್ತ ಪರಿಣಾಮ ಬಿರುತ್ತಿದೆ. ಮತ್ತು 2 ರ ಒಳಗೆ ಪರೀಕ್ಷಾ ಶುಲ್ಕ ಪಾವತಿ ಮಾಡುವಂತೆಯೂ ಸಹ ತಿಳಿಸಿದೆ. ಅಧಿಸೂಚನೆ 24 ರಂದು ಹೊರಡಿಸಿದರು ವಿದ್ಯಾರ್ಥಿಗಳಿಗೆ 26 ಮತ್ತು 27 ನೇ ದಿನಾಂಕದಂದು ವಿದ್ಯಾರ್ಥಿಗಳ ಗಮನಕ್ಕೆ ಬಂದಿದೆ. 1 ಮತ್ತು 2 ನೇ ದಿನಾಂಕ ಹಬ್ಬದ ಕಾರಣ ರಜಾ ಇರುವ ಕಾರಣ 29 ಮತ್ತು 30 ನೇ ದಿನಾಂಕದಂದು ಪಾವತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆಚ್ಚಾಗಿ ಸರ್ಕಾರಿ ಕಾಲೇಜುಗಳಲ್ಲಿ, ಬಡವ, ರೈತ, ಕಾರ್ಮಿಕ, ದಲಿತ, ಹಿಂದುಳಿದ ವಿದ್ಯಾರ್ಥಿಗಳು ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವರ್ಷ ಸುಮಾರು 400 ರೂ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಆದರಿಂದ ತಕ್ಷಣ ಪರೀಕ್ಷಾ ಶುಲ್ಕ ಕಡಿಮೆ ಮಾಡಬೇಕು ಮತ್ತು ಪರೀಕ್ಷಾ ಶುಲ್ಕ ದಿನಾಂಕ ಮತ್ತು ಮುಖ್ಯ ಪರೀಕ್ಷೆಗಳನ್ನು ಮುಂದೂಡಬೇಕೆಂದು ಮಾತನಾಡಿದರು ಎಂದು ಆಗ್ರಹಿಸಿದರು.
ಹುಣಸೂರು ತಾಲೂಕು ಅಧ್ಯಕ್ಷರು ಜೀವನ್ ಕುಮಾರ್ ಮಾತನಾಡಿ ಕೂಡಲೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು ತಪ್ಪಿದ್ದರೆ ವಿದ್ಯಾರ್ಥಿಗಳು ಮೈಸೂರು ಚಲೋ ಮಾಡುತ್ತೇವೆ ಎಂದು ತಿಳಿಸಿದರು.
ಈ ಹೋರಾಟದಲ್ಲಿ ತಾಲೂಕು ಕಾರ್ಯದರ್ಶಿ ಪ್ರಿಯಾ ರಾಜ್ಯ ಸಮಿತಿ ಸದಸ್ಯರಾದ ಅಭಿ ಡಿ ಮತ್ತು ರಜಿಯಾ ಯಾಸ್ಮಿನ್ ಹಾಗೂ ವಿದ್ಯಾರ್ಥಿ ಮುಖಂಡರಾದ ದೀಕ್ಷಿತಾ, ಸಹನಾ, ಸಿಂಚನ, ಸ್ಫೂರ್ತಿ ನಿಶಿತಾ, ಮಂಜು ಮತ್ತು ಮೊಹಮ್ಮದ್ ಸಕ್ಲೇನ್ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದನ್ನೂ ನೋಡಿ : ವಚನಾನುಭವ 33 | ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ Janashakthi Media
