ನಗರದಲ್ಲಿಯೆ ಸರ್ಕಾರಿ ಕಾನೂನು ಕಾಲೇಜ್ ಸ್ಥಾಪಿಸಿ – ಎಸ್ಎಫ್ಐ ಆಗ್ರಹ

ಹಾವೇರಿ: ಸರ್ಕಾರಿ ಕಾನೂನು ಮಹಾವಿದ್ಯಾಲಯ ನಗರದಲ್ಲಿಯೇ ಕಟ್ಟಡ ಕಟ್ಟಲು ಹಾಗೂ ಪ್ರಸಕ್ತ ವರ್ಷದಿಂದಲ್ಲೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ಕಾರ್ಯಕರ್ತರು ರಾಜ್ಯ ಸರ್ಕಾರದ ಉಪ ಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಗೆ ಅವರ ಗೃಹ ಕಚೇರಿಯಲ್ಲಿ ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.  ಮಹಾವಿದ್ಯಾಲಯ

ಹಾವೇರಿ ಜಿಲ್ಲಾ ಕೇಂದ್ರವಾಗಿ 26 ವರ್ಷಗಳು ಉರುಳಿದರೂ ಸಹ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿದ್ಯಾರ್ಥಿ ಸಮುದಾಯ ನೂರಾರು ಸಮಸ್ಯೆಗಳನ್ನು ಎದುರಿಸುವ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ ಇದುವರೆಗೂ ಇಲ್ಲಿ ಆಳ್ವಿಕೆ ಮಾಡಿದ ಸಚಿವರು, ಶಾಸಕರು, ಸಂಸದರು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ಅವರನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿಸಲು ಹೊರಟಿದೆ ಎಂದು ಸಂಘಟನೆಯ ನಾಯಕರು ಶಾಸಕರ ಎದುರು ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿದರು.  ಮಹಾವಿದ್ಯಾಲಯ

ಇದನ್ನೂ ಓದಿ: ಶಂಕಿತ ಡೆಂಗ್ಯೂಗೆ ಯುವಕ ಸೇರಿ ಇಬ್ಬರು ಬಲಿ; ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಕೇಸ್​ ದಾಖಲು

ನೂರಾರು ವಿದ್ಯಾರ್ಥಿಗಳು ಇವತ್ತು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆಯಬೇಕು ಅದರಲ್ಲೂ ವಕೀಲರಾಗಬೇಕೆಂದು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 26 ವರ್ಷ ಕಳೆದರು ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ಬೇರೆ ಬೇರೆ ಜಿಲ್ಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುವಂತಾಗಿದೆ.

ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಖಾಸಗಿ ಕಾನೂನು ಕಾಲೇಜ್ ಇದ್ದು ಅದು ರಾಣೇಬೆನ್ನೂರನಲ್ಲಿ ಖಾಸಗಿ ಕಾಲೇಜುಗೆ ಪ್ರತಿ ವರ್ಷವು 60 ಸೀಟ್ ಗಳಿಗೆ ನೂರಾರು ಅರ್ಜಿಗಳು ಬರುತ್ತವೆ ಅದರಲ್ಲಿ ಕೇವಲ 60 ಸೀಟ್ ತೆಗೆದುಕೊಳ್ಳುವ ನಿಯಮದಂತೆ ಭರ್ತಿ ಮಾಡಿಕೊಳ್ಳುತ್ತಾರೆ. ಇತರೆ ವಿದ್ಯಾರ್ಥಿಗಳಿಗೆ ಸೀಟ್ ಸಿಗದಿರುವುದು‌ ಹಾಗೂ ಸರ್ಕಾರಿ ಶುಲ್ಕ ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾದ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಶಿರಸಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಮೊರೆ ಹೋಗಬೇಕಾಗಿದೆ ಎಂದು ಹೇಳಿದರು.

ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಅನೇಕ ವರ್ಷಗಳಿಂದ ಹಾವೇರಿ ಜಿಲ್ಲೆಗೊಂದು ಕಾನೂನು ಕಾಲೇಜು ಮಂಜೂರು ಮಾಡುವಂತೆ ಹೋರಾಟ ಮಾಡುತ್ತಾ ಬಂದಿದೆ ಹೋರಾಟದ ಪ್ರತಿಫಲವಾಗಿ ಕಳೆದ ಸರ್ಕಾರ ಘೋಷಣೆ ಮಾಡಿದ್ದು.  ಕಾನೂನು ಪದವಿ ಪಡೆಯ ಬಯಸುವ ನೂರಾರು ವಿದ್ಯಾರ್ಥಿಗಳು ಹಾವೇರಿಯಲ್ಲಿ ಸರ್ಕಾರಿ ಕಾಲೇಜ್ ಪ್ರಾರಂಭವಾಗಬಹುದು ಎಂದು ಎದುರು ನೋಡುತ್ತಾ ಕುಳಿತ್ತಿದ್ದಾರೆ. ಆದರೆ ಎರಡುಮೂರು ವರ್ಷ ಕಳೆದರು ಯಾವುದೇ ರೀತಿಯ ಬೆಳೆವಣಿಗೆ ಕಾಣುತ್ತಿಲ್ಲದಿರುವುದು ಸರ್ಕಾರದ ನಿರ್ಲಕ್ಷ್ಯತನ ಖಂಡನೀಯ ಎಂದು ವಿದ್ಯಾರ್ಥಿ ಸಂಘಟನೆಯ ನಾಯಕರು ಆರೋಪಿಸಿದರು.

ನಗರದಿಂದ ದೂರದ ಯಾವುದೇ ಸಾರಿಗೆ ಸಂಪರ್ಕ ಇಲ್ಲದಿರುವ ನೆಲೋಗಲ್ ಗುಡ್ಡದಲ್ಲಿ ಮಾಡುತ್ತಿರುವುದು ಸರಿಯಲ್ಲ ಅಲ್ಲಿಗೆ ಬಸ್ ಗಳು ಹೋಗುವುದಿಲ್ಲ ಕನಿಷ್ಠ ದ್ವಿಚಕ್ರ ವಾಹನಗಳು ಹೋಗುವುದು ಸರಿಯಾದ ಹಾದಿ ಇಲ್ಲದೆ ಕಾನೂನು ಶಿಕ್ಷಣದಿಂದ ವಂಚಿತರಾಗುವ ಅಪಾಯ ಕಾಡುತ್ತದೆ. ಆದರಿಂದ ನಗರದಲ್ಲಿಯೇ ಕಟ್ಟಡ ಕಟ್ಟವಂತಾಗಬೇಕು ಹಾಗೂ ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಮುನಿಸಿಪಲ್ ಮೈದಾನದಲ್ಲಿ ನಡೆಸಲು ಎಲ್ಲಾ ರೀತಿಯ ಅವಕಾಶಗಳಿವೆ ಎಂದು ಮನವರಿಕೆ ಮಾಡಿದರು.

ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ವಿಚಾರವಾದಿಗಳ, ಪ್ರಗತಿಪರ ಸಂಘಟನೆಗಳು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿ ನೆಲೋಗಲ್ ಗುಡ್ಡದಲ್ಲಿ ಕಟ್ಟಬೇಕಾದ ಸರ್ಕಾರಿ ಕಾನೂನು ಮಹಾವಿದ್ಯಾಲಯವನ್ನು ನಗರದಲ್ಲಿ ಕಟ್ಟಲು ತೀರ್ಮಾನಿಸಬೇಕು‌‌. ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಈತ ಗಮನಾರ್ಹಸಬೇಕು ಮತ್ತು ಎಸ್ಎಫ್ಐ ಎತ್ತಿದ ದ್ವನಿಗೆ ಸ್ಪಂದನೆ ಸಿಗಬೇಕು ಎಂದು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಸುಲೆಮಾನ್ ಮತ್ತಿಹಳ್ಳಿ, ಲಕ್ಷ್ಮಣ ಕೆಂಗಪ್ಪಳವರ, ನಾಗರಾಜ ಲಮಾಣಿ, ಪ್ರದೀಪ್ ಎಸ್ ಆರ್, ಮಾಲತೇಶ್ ನೆಗಳೂರ, ಈಸ್ವರ ಡಿ ಎಚ್, ದಯಾನಂದ ಹಿರೇಮಠ ಉಪಸ್ಥಿತರಿದ್ದರು.

ಇದನ್ನೂ ನೋಡಿ: ವಚನಾನುಭವ – 02| ದೇಹಾರಕ್ಕೆ ಆಹಾರವೆ ನಿಚ್ಚಣಿಗೆ – ಡಾ. ಮೀನಾಕ್ಷಿ ಬಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *