ರಾಜ್ಯ ಸರಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಎಸ್ಎಫ್ಐ ಒತ್ತಾಯ

ರಾಣೆಬೆನ್ನೂರು: ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿದೆ. ಸರಕಾರದ ಈ ನಡೆ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಹಾಗಾಗಿ ರಾಜ್ಯ ಸರಕಾರ ವಿ.ವಿ ಗಳನ್ನು ಮುಚ್ಚುವ ತೀರ್ಮಾನವನ್ನು ರದ್ದುಪಡಿಸಿ ಯಥಾ ಸ್ಥಿತಿಯಲ್ಲಿ ವಿ.ವಿ ಗಳನ್ನು ಮುಂದುವರೆಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ಸಮಿತಿ ಒತ್ತಾಯಿಸುತ್ತದೆ. ಮುಚ್ಚುವ

2023 ರಲ್ಲಿ ಅಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ಹೊಸ ವಿಶ್ವ ವಿದ್ಯಾಲಯಗನ್ನು ಪ್ರಾರಂಭ ಮಾಡಿತ್ತು ಆದರೆ ಅಂದಿನ ಸರ್ಕಾರ ಅಗತ್ಯ ಅನುದಾನ ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಬೇಕಾದ ಸೌಲಭ್ಯಗಳನ್ನು ಒದಗಿಸದೇ ಏಕಾಏಕಿ ಪ್ರಾರಂಭಿಸಿತು. ನಂತರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೇಸ್ ಸರಕಾರವು ಕೂಡ ಕಳೆದ ಎರಡು ವರ್ಷದಿಂದ ಯಾವುದೇ ಅನುದಾನ ನೀಡಲಿಲ್ಲ. ಇಂತಹ ಸಂಕಷ್ಟಮಯ ಪರಿಸ್ಥಿತಿಯಲ್ಲಿಯೂ ಕೂಡ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ.

ಸರಕಾರ ಮುಚ್ಚಲು ಹೊರಟಿರುವ ಈ ವಿ.ವಿ ಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು, ಬೋದಕೇತರ ಸಿಬ್ಬಂದಿ ನೇಮಕ, ಗ್ರಾಂಥಾಲಯ, ಪ್ರಯೋಗಾಲಯ, ಹಾಸ್ಟೇಲ್, ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು. ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮುನ್ನಡೆಯುತ್ತಿವೆ.

ಇದನ್ನೂ ಓದಿ: ಫೆ.23 ರಂದು ಬಿಜಿವಿಎಸ್ 9ನೇ ಸಮ್ಮೇಳನ

ಈಗಾಗಲೇ ಈ ವಿವಿಯಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋದಕ ಮತ್ತು ಬೋದಕೇತರ ವರ್ಗ ಮತ್ತು ಈ ವಿ.ವಿಗಳಿಗೆ ಸೇರ್ಪಡೆಯಾಗಿರುವ ನೂರಾರು ಪದವಿ ಕಾಲೇಜುಗಳು ಮತ್ತು‌ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣವನ್ನು ಕೇವಲ ಲಾಭದ ದೃಷ್ಟಿಯಲ್ಲಿ ನೋಡದೆ ಮಾನವ ಸಂಪನ್ಮೂಲ ಅಭಿವೃದ್ಧಿಯ ದೃಷ್ಟಿಯಿಂದ ಈ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಹೆಚ್ಚಿನ ಅನುಧಾನ ಬಿಡುಗಡೆ ಮಾಡಿ‌ ವಿವಿಗಳನ್ನು ಉಳಿಸಬೇಕಾಗಿದೆ.

ವಿಶ್ವ ವಿದ್ಯಾಲಯಗಳನ್ನು ಬಲಿಷ್ಠಪಡಿಸುವ ಬದಲು ಮುಚ್ಚುವ ತೀರ್ಮಾನವು ಆಯಾ ಜಿಲ್ಲೆಯ ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಂಚಿಸುವುದಾಗಿದೆ. ಹಾಗಾಗಿ ಸಚಿವ ಸಂಪುಟದ ಉಪಸಮಿತಿ ತೆಗೆದುಕೊಂಡಿರುವ ನಿರ್ಧಾರವನ್ನು ಸರಕಾರ ಯಾವುದೇ ಕಾರಣ ನೀಡದೇ ಕೂಡಲೇ ಹಿಂಪಡೆಯಬೇಕು.

ರಾಜ್ಯ ಸರಕಾರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಬೌದ್ದಿಕ ಸ್ವಾವಲಂಬನೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿವಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಬಲಪಡಿಸಬೇಕು.ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಹಾಗೂ ಅನುದಾನವನ್ನು ನೀಡುವ ಮೂಲಕ ವಿಶ್ವ ವಿದ್ಯಾಲಯಗಳನ್ನು ಬಲಪಡಿಸಬೇಕು ಮತ್ತು ಸಂಪುಟ ಉಪಸಮಿತಿಯ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ವಿಶ್ವ ವಿದ್ಯಾಲಯದ ಉಳಿವಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆಂದು ಎಸ್ ಎಫ್ ಐ ರಾಜ್ಯ ಸಮಿತಿಯು ಸರಕಾರವನ್ನು ಒತ್ತಾಯಿಸುತ್ತದೆ.

ಇದನ್ನೂ ನೋಡಿ: ಬಹುರೂಪಿ : ಶರಣ ಚಳವಳಿಯ ಕನ್ನಡಿಯಲ್ಲಿ ವರ್ತಮಾನದ ಬಿಕ್ಕಟ್ಟುಗಳು ಹಾಗೂ ಬಿಡುಗಡೆಯ ದಾರಿ Janashakthi Media

Donate Janashakthi Media

Leave a Reply

Your email address will not be published. Required fields are marked *