ಅಂಬೇಡ್ಕರ್ ಅವರ ಕುರಿತು ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು: ಪ್ರಧಾನಿ ಮೋದಿಗೆ ‘ಇಂಡಿಯಾ’ ಒಕ್ಕೂಟ ಆಗ್ರಹ

ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಸಭೆಯಲ್ಲಿ ಆಡಿದ ಮಾತುಗಳು ಭಾರಿ ಕೋಲಾಹಲಕ್ಕೆ ಕಾರಣವಾಗಿವೆ. ‘ಅಂಬೇಡ್ಕರ್ ಅವರ ಕುರಿತು ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು ಸಂಪುಟದಿಂದ ಅವರನ್ನು ವಜಾ ಮಾಡಬೇಕು’ ಎಂದು ‘ಇಂಡಿಯಾ’ ಕೂಟದ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ..

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಂಸದರು, ಸಂಸತ್ ಒಳಗೆ ಮತ್ತು ಹೊರಗೆ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ : ನವ ಉದಾರವಾದ ಮತ್ತು ಅದರ ಮೊದಲು – ಜಿಡಿಪಿ ದತ್ತಾಂಶ ಮರೆಮಾಚುವ ಸತ್ಯಾಂಶ

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತಂತೆ ತಾವು ನೀಡಿದ ಹೇಳಿಕೆಗೆ ಅಮಿತ್ ಶಾ ಕ್ಷಮೆಯಾಚಿಸಬೇಕು ಮತ್ತು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿಪಿಐಎಂನ ಜಾನ್‌ ಬ್ರಿಟ್ಟಾಸ್‌ ಸೇರಿದಂತೆ ಇಂಡಿಯಾ ಕೂಟದ ಸಂಸದರು ಒತ್ತಾಯಿಸಿದ್ದಾರೆ.

ಇದನ್ನೂ ನೋಡಿ : ಒಂದು ದೇಶ ಒಂದು ಚುನಾವಣೆ ಸರ್ವಾಧಿಕಾರಕ್ಕೆ ಮುನ್ನುಡಿಯೇ? – ಕೃಷ್ಣ ಪ್ರಸಾದ್ Janashakthi Media

Donate Janashakthi Media

Leave a Reply

Your email address will not be published. Required fields are marked *