ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ದೃಷ್ಟಿಯಿಂದ ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದೆ. ವಿದ್ಯಾವಾಹಿನಿ ಯೋಜನೆಯಡಿ ₹350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರೊಂದಿಗೆ ಶಾಲಾ-ಕಾಲೇಜುಗಳ ಮಕ್ಕಳ ಸಾರಿಗೆ ಸಂಪರ್ಕ ಸಮಸ್ಯೆ ನಿವಾರಣೆಗೆ ಕ್ರಮ. ʻಮಕ್ಕಳ ಬಸ್ ಯೋಜನೆʼ ಪ್ರಾರಂಭ ಮಾಡಲು ನಿರ್ಧಾರ. ಈ ಯೋಜನೆಗೆ ₹100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್‍ಗಳ ಕಾರ್ಯಾಚರಣೆ. 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು
ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಸಾಧಕರ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವರ ಯಶೋಗಾಥೆಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಕೆ ಕುರಿತ ಪ್ರಸ್ತಾಪಗಳು ಬಜೆಟ್‌ನಲ್ಲಿ ಇದ್ದವು.
ಹೊಸ ಕೈಗಾರಿಕಾ ವಸಾಹತು ಸ್ಥಾಪನೆ
ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರ ದ ಬದನಗುಪ್ಪೆ, ಕಲಬುರಗಿ ಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್ ಜಿಲ್ಲೆಯ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ, ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪನೆ
ಪಾವಗಡ ಸೋಲಾರ್ ಪಾರ್ಕ್ 2 ಮೆಗಾ ವ್ಯಾಟ್ಸ್ ಸಾಮರ್ಥ್ಯದ ಸೌರ ಘಟಕದಲ್ಲಿ ₹48 ಕೋಟಿ ವೆಚ್ಚದಲ್ಲಿ ಬ್ಯಾಟರಿ ಶೇಖರಣೆ ವ್ಯವಸ್ಥೆ
ದೇವನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿಸ್ತರಣೆಗೆ ₹2 ಕೋಟಿ ಅನುದಾನ
ಮೈಶುಗರ್ ಕಾರ್ಖಾನೆಯಲ್ಲಿ ಎಥನಾಲ್ ಉತ್ಪಾದನಾ ಘಟಕ ಸ್ಥಾಪನೆ
ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್ ನಿರ್ಮಾಣ
ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರಲ್ಲಿ ನೂತನ ಮೆಗಾ ಜವಳಿ ಪಾರ್ಕ್ ನಿರ್ಮಾಣ
ನಗರ ಮತ್ತು ಪಟ್ಟಣಗಳಲ್ಲಿ ದಿವಂಗತ ಶಂಕರ್ ನಾಗ್ ಹೆಸರಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣ ನಿರ್ಮಾಣ
ಮಾನವ -ಆನೆ ಸಂಘರ್ಷ ತಡೆಯುವ ಸಲುವಾಗಿ ವಿವಿಧ ಕಾಮಗಾರಿಗಳಿಗೆ ₹155 ಕೋಟಿ ಅನುದಾನ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣ