ಬೆಂಗಳೂರು: ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಚುನಾವಣಾ
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ನಿತ್ಯದ ಪಾಠಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ಚುನಾವಣಾ
ರಜಾ ದಿನಗಳು, ಬೋಧಕೇತರ ಅವಧಿಯಲ್ಲಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದ್ದರಿಂದ ಬೋಧಕೇತರ ಹಾಗೂ ಇತರೆ ಇಲಾಖೆಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ನಿತ್ಯದ ಪಾಠಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ನೋಡಿ : ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಮಾತನಾಡುವುದು ತಪ್ಪೆ? ಯಾಕೆ ಅಪಪ್ರಚಾರ ಮಾಡ್ತೀರಿ? Janashakthi Media