ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ ಮಾತನಾಡಿದರು.

ಬಂಡವಾಳ ಹೂಡಿಕೆದಾರರು ನೆರೆ ರಾಜ್ಯಗಳಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವ ವಿಚಾರವಾಗಿ ಬಿಜೆಪಿ ನಾಯಕರ ಟೀಕೆ ಬಗ್ಗೆ ಮಾಡುತ್ತಿರುವುದು ಸರಿಯಲ್ಲ.ಈ ರೀತಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಅವರು ದಾಖಲೆಗಳನ್ನು ಪರಿಶೀಲಿಸಿ ಮಾತನಾಡಬೇಕು. ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರಿನಿಂದ ವ್ಯಕ್ತಿ ಸಾವಿಗೆ ಸರಕಾರದ ವೈಫಲ್ಯವೇ ಕಾರಣ: ಅಶ್ವತ್ಥನಾರಾಯಣ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ನಮ್ಮ ಕೈಗಾರಿಕಾ ಸಚಿವರು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಈ ವಿಚಾರವಾಗಿ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ. ಕರ್ನಾಟಕ ಪ್ರಗತಿ, ಅಭಿವೃದ್ಧಿ ಹಾಗೂ ಶಾಂತಿಯ ನಾಡು ಎಂದು ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ರಾಜ್ಯ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದೆ” ಎಂದರು.

ಇನ್ನು ಪ್ರಜ್ವಲ್ ರೇವಣ್ಣ ವಿಚಾರವಾಗಿ ಹೆಚ್.ಡಿ.ದೇವೇಗೌಡ ಬರೆದಿರುವ ಪತ್ರ ಕುಟುಂಬದ ವಿಚಾರವಾಗಿರುವುದರಿಂದ ಈ ಬಗ್ಗೆ ಮಾತನಾಡುವುದಿಲ್ಲ.ಬಿಜೆಪಿಯ ಹಾಗೂ ಅದರ ನಾಯಕರ ಯಾವುದೇ ಟೀಕೆಗೆ ನಾವು ಹೆದರದೇ ಜನರಿಗಾಗಿ ಕೆಲಸ ಮಾಡುತ್ತೇವೆ. ನಾವು ಜನರಿಗಾಗಿ ಇದ್ದೇವೆ. ಜನ ನಮ್ಮ ಪರವಾಗಿ ಇರುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್‌ ಉತ್ತರಿಸಿದರು.

ಇದನ್ನೂ ನೋಡಿ: ಐದು ಹಂತದ ಮತದಾನ ಮುಗಿದರೂ ವಿವರ ನೀಡದ ಚುನಾವಣಾ ಆಯೋಗ : ಆಯೋಗದ ಸುತ್ತ ಅನುಮಾನದ ಹುತ್ತJanashakthi Media

Donate Janashakthi Media

Leave a Reply

Your email address will not be published. Required fields are marked *