ಜಗದೀಶ್ ಶೆಟ್ಟರ್ ನಂತಹ ನಾಯಕರು ಪಕ್ಷ ಬಿಟ್ಟು ಹೋದರೂ ಬಿಜೆಪಿಗೆ ನಷ್ಟವಿಲ್ಲ : ಸಿಎಂ ಬೊಮ್ಮಾಯಿ

Please follow and like us:

ವಿಜಯನಗರ: ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಪಕ್ಷ ಬಿಟ್ಟು ಹೋದರೂ ಅವರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿ ಅವರು, ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು, ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ ಎಂದರು.

ಬಿಜೆಪಿಯ ಕೆಲವು ಹಿರಿಯ ನಾಯಕರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆನಂದಸಿಂಗ್​ಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆಸರಿದು ಯುವಕರಿಗೆ ಅವಕಾಶ ಮಾಡಿಕೊಟ್ಟರು. ಜಗದೀಶ್ ಶೆಟ್ಟರ್ ಕೂಡ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ರಾಜ್ಯದಲ್ಲಿ ಪಕ್ಷ ದೊಡ್ಡ ಸ್ಥಾನಮಾನಗಳನ್ನು ನೀಡಿತ್ತು. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು.

Please follow and like us:
Donate Janashakthi Media

Leave a Reply

Your email address will not be published. Required fields are marked *