ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಸಿಎಂ ಯಶಸ್ವಿ

ಬೆಂಗಳೂರು:  ಶಿಗ್ಗಾಂವಿ ಉಪಚುನಾವಣೆಯಲ್ಲಿ ಯಾಸೀರ್ ಗೆ ಕಾಂಗ್ರೆಸ್ ನಿಂದ  ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ರನ್ನು ತಮ್ಮ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸಿದ್ದು, ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಾಸ್ ಪಡೆಯುವಂತೆ ಸಿಎಂ ಸೂಚಿಸಿದ್ದಾರೆ.

ಇದನ್ನೂ ಓದಿ: ಅನಧಿಕೃತ ಹಾಗು ಅಕ್ರಮ ಕಟ್ಟಡ ನಿರ್ಮಾಣಕ್ಕೆ ನಿಯಂತ್ರಣ ಹಾಕಿ, ಕಾರ್ಮಿಕರಿಗೆ ರಕ್ಷಣೆ ಒದಗಿಸಿ – ಸಿಪಿಐಎಂ ಒತ್ತಾಯ

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪರ ಪ್ರಚಾರ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಮನವಿ ಹಿನ್ನೆಲೆಯಲ್ಲಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯಲು ಒಪ್ಪಿದ್ದು, ಬಂಡಾಯ ಶಮನವಾಗಿದೆ.

ಇದನ್ನೂ ನೋಡಿ: ಉಪನ್ಯಾಸ | “ಪರಿಸರ ಪ್ರಜ್ಞೆ- ಯುವ ತಲೆಮಾರು” | ‘ಸುಸ್ಥಿರ ಸಮಾಜಕ್ಕಾಗಿ ಸ್ವಚ್ಛ‌ ಪರಿಸರ’

Donate Janashakthi Media

Leave a Reply

Your email address will not be published. Required fields are marked *