ಹಾವೇರಿ: ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಳಗೆ ಉದ್ಭವಿಸಿರುವ ಬಂಡಾಯದ ಬಿಸಿ ತಣ್ಣಗಾದಂತೆ ಕಾಣುತ್ತಿಲ್ಲ. ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ನ ಆಜಂಪೀರ್ ಖಾದ್ರಿ ಗೆ ಸಿಎಂ ಸಿದ್ದರಾಮಯ್ಯ ಮನವೊಲಿಸಿದ ನಂತರವೂ ನಾಮಪತ್ರ ಹಿಂಪಡೆಯಲು ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಶಿಗ್ಗಾವಿ
ನಾಮಪತ್ರ ಸಲ್ಲಿಸಿರುವ ಅಜ್ಜಂಪೀರ್ ಖಾದ್ರಿ ಜೊತೆ ಮಾತುಕತೆ ನಡೆಸಿ, ಪಕ್ಷದ ಹಿತದೃಷ್ಟಿಯಿಂದ ನಾಮಪತ್ರ ಹಿಂಪಡೆಯುವಂತೆ ತಿಳಿಸಿದ್ದಾಗಿ ಸಿಎಂ ಹೇಳಿದ್ದರು.
ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಸಿಎಂ ಯಶಸ್ವಿ
ನಾಮಪತ್ರ ಹಿಂಪಡೆಯುವ ಜೊತೆಗೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಖಾದ್ರಿ ವಾಗ್ದಾನ ನೀಡಿದ್ದಾರೆ ಅಂತಲೂ ತಿಳಿಸಿದ್ದರು.
ಆದರೆ, ಸಭೆ ಬಳಿಕ ಖಾದ್ರಿ ಅವರು ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ. ತಾವು ಸ್ಪರ್ಧಿಸುವುದು ಖಚಿತ ಎಂದು ಆಪ್ತರ ಬಳಿ ಹೇಳಿಕೆ ನೀಡಿದ್ದಾರಂತೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಪಠಾಣ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ನೋಡಿ: ಭ್ರಷ್ಟ ರಾಜಕೀಯ ಹಾಗೂ ಅಧಿಕಾರಶಾಹಿಗೆ ಅಮಾಯಕ ಕಟ್ಟಡ ಕಾರ್ಮಿಕರು ಬಲಿ Janashakthi Media