ಶಿಕ್ಷಕರ ನೇಮಕಾತಿ ಅಕ್ರಮ ಹಗರಣ : ಮತ್ತೆ ನಾಲ್ವರು ಶಿಕ್ಷಕರು ಅರೆಸ್ಟ್

ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಹಗರಣದಲ್ಲಿ ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ.

ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದೀಗ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ. ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್‌ಎಸ್ ಶಾಲೆಯ ಪ್ರತಾಪ್ ಸಿಂಗ್,ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿಜಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊರಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ. ಯೋಗೇಶ್ವರಪ್ಪ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಸೋಮನಗೌಡ ಪಾಟೀಲ್ ಬಂಧಿರಾಗಿದ್ದಾರೆ.

ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗಿದ್ದು, ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಬಳಿಕ ನ್ಯಾಯಾಲಯದ ಮುಂದೆ ಆರೋಪಿ ಶಿಕ್ಷಕರನ್ನು ಹಾಜರುಪಡಿಸಿರುವ ಕೋರ್ಟ್ ಆದೇಶದ ಮೇರೆಗೆ ಸಿಐಡಿ ಅಧಿಕಾರಿಗಳು ಬಂಧಿತ ಶಿಕ್ಷಕರನ್ನು ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಪ್ರಕರಣದ ಹಿನ್ನೆಲೆ : 2012-13 ಮತ್ತು 2014-15ನೇ ಸಾಲಿನ ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ (ಗ್ರೇಡ್‌-2) ಹಾಗೂ ದೈಹಿಕ ಶಿಕ್ಷಕರ (ಗ್ರೇಡ್‌-1) ನೇಮಕದಲ್ಲಿ ಅಕ್ರಮ ನಡೆದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಮಹೇಶ ಶ್ರೀಮಂತ ಸೂಸಲಾಡಿ ಎಂಬವರು 2012-13ನೇ ಸಾಲಿನಲ್ಲಿ ಅಕ್ರಮವಾಗಿ ನೇಮಕ ವಾಗಿದ್ದ ಸಂಬಂಧ ತನಿಖೆ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಆ.12ರಂದು ದೂರು ದಾಖಲಿಸಿದ್ದರು. 2014-15ನೇ ಸಾಲಿನಲ್ಲಿ ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮದ ಸಂಬಂಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ಗಂಭೀರತೆ ಅರಿತ ಸರಕಾರವು ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

Donate Janashakthi Media

Leave a Reply

Your email address will not be published. Required fields are marked *