ಬೆಂಗಳೂರು: ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಂತಿ ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಅಂತಹ ಕೃತ್ಯಗಳಿಗೆ ಪ್ರೋತ್ಸಾಹವನ್ನೂ ನೀಡುವುದಿಲ್ಲ. ಯಾರೇ ಆಗಿದ್ದರೂ ಪೊಲೀಸರು ಹೆಡೆಮುರಿ ಕಟ್ಟಲಿದ್ದಾರೆ. ದೇವರು, ಧರ್ಮದ ಹೆಸರಲ್ಲಿ ಇಂಥಾ ಕೃತ್ಯ ಮಾಡಿದರೆ ಸಮ್ಮನೆ ಬಿಡಲ್ಲ ಎಂದು ಕಿಡಿಗೇಡಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಆಹಾರ ಕಳ್ಳತನ ಆರೋಪ: 13 ವರ್ಷದ ಆದಿವಾಸಿ ಬಾಲಕನ ಗುಂಪು ಹತ್ಯೆ ಮಾಡಿ ರಸ್ತೆಯಲ್ಲಿ ಎಸೆದ ದುಷ್ಕರ್ಮಿಗಳು
ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ರಾಗಿ ಗುಡ್ಡದಲ್ಲಿ ಮೆರವಣಿಗೆ ಹೋಗ್ತಿದ್ದಾಗ ಕಲ್ಲು ಎಸೆದಿದ್ದು, ಪೊಲೀಸರ ಮೇಲೂ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಶಿವಮೊಗ್ಗದ ಪರಿಸ್ಥಿತಿ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.
ವಿಡಿಯೋ ನೋಡಿ: ‘ಹೊಸ ಪಠ್ಯಪುಸ್ತಕ ರಚನೆ ಬದಲಿಗೆ ಮತ್ತೆ ಮತ್ತೆ 12 ವರ್ಷ ಹಳೆಯದಾದ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತಿರುವುದು ಯಾಕೆ?’