ಶಿರೂರು ಭೂ ಕುಸಿತ: ಕಾಣೆಯಾಗಿದ್ದ ಲಾರಿಯ ಅವಶೇಷ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಭೂ ಕುಸಿತವಾಗಿ 29 ದಿನವಾಗಿದೆ. ಇದರ ಬೆನ್ನಲ್ಲೇ ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಗಂಗಾವಳಿ ನದಿಯಲ್ಲಿ ಸಂಜೆ ವೇಳೆಯಲ್ಲಿ ಶೋಧಕಾರ್ಯಕ್ಕಿಳಿದಿದ್ದು, ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗವನ್ನು ಶೋಧ ನಡೆಸಿ ಹೊರತೆಗೆದಿದ್ದಾರೆ. ಕುಸಿತ

ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದೆ. ಹೀಗಾಗಿ ಗಂಗಾವಳಿ ನದಿಯಲ್ಲಿ ಜಿಲ್ಲಾಡಳಿತದ ತಡೆಯ ಮಧ್ಯೆಯೇ ಶೋಧ ಕಾರ್ಯ ಮುಂದುವರೆದಿದೆ. ಕುಸಿತ

ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಈಶ್ವರ್ ಮಲ್ಪೆ ಗಂಗಾವಳಿ ನದಿಗೆ ಇಳಿದಿದ್ದಾರೆ. ಸೇನಾ ತಂಡ ಈ ಹಿಂದೆ ಗುರುತಿಸಿದ ಜಾಗದಲ್ಲಿ ಮತ್ತೊಮ್ಮೆ ಮುಳುಗಿ ಈಶ್ವರ ಮಲ್ಪೆ ಶೋಧ ನಡೆಸಿದ್ದಾರೆ. ಶಾಸಕ ಸತೀಶ್ ಸೈಲ್, ಕೇರಳ ರಾಜ್ಯದ ಶಾಸಕ ಆಶ್ರಫ್ ಕೂಡ ಹಾಜರಿದ್ದರು.

ಇದನ್ನೂ ಓದಿ: ಮದುವೆ ಮಾಡಿಸಿ ದೋಚುವ ಮೂವರು ಮಹಿಳೆಯರ ಗ್ಯಾಂಗ್ ಅರೆಸ್ಟ್!

ಈ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ. ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಪತ್ತೆ ಮಾಡಲಾಗಿದೆ. ಲಾರಿಯ ಎರಡು ಬಿಡಿ ಭಾಗಗಳು ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಒಂದು ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ. ಬಾಗಿಲಿನ ಕೀಲು ತನ್ನ ವಾಹನದ್ದಲ್ಲ. ಆದರೆ ಜಾಕ್ ಮಾತ್ರ ತನ್ನ ವಾಹನದ್ದೇ ಎಂದು ನಾಪತ್ತೆಯಾದ ಬೆಂಜ್ ಲಾರಿಯ ಮಾಲಿಕ ಮುಫಿನ್ ತಿಳಿಸಿದ್ದಾರೆ.

ಕಾರ್ಯಾಚರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರ್ ಮಲ್ಪೆ, ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಾಚರಣೆ ಆರಂಭ ಮಾಡಿದೆವು. ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಯಿತು. ಕಾರ್ಯಾಚರಣೆ ವೇಳೆ ಬೆಂಜ್ ಲಾರಿಯ ಜಾಕ್ ಪತ್ತೆ ಆಗಿದೆ. ಜಾಕ್ ಪತ್ತೆ ಆಗಿದ್ದ ಬಳಿಯೇ ಕೆಳಗೆ ಲಾರಿ ಇರುವುದು ಖಚಿತವಾಗಿದೆ. ನಾಳೆ ಬೆಳಗ್ಗೆ 8:30ಕ್ಕೆ ಮತ್ತೆ ಕಾರ್ಯಾಚರಣೆ ಆರಂಭ ಮಾಡುತ್ತೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ ಎಂದರು.

ಇದನ್ನೂ ನೋಡಿ: ಬೆಂಗಳೂರಲ್ಲಿ ಭಾರೀ ಮಳೆ : ರಸ್ತೆ ಜಲಾವೃತ, ಸಂಚಾರಕ್ಕೆ ಸಂಕಷ್ಟJanashakthi Media

Donate Janashakthi Media

Leave a Reply

Your email address will not be published. Required fields are marked *