ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಸ್ಥಾಪಿಸಲಾಗಿರುವ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಅನಾವರಣಗೊಂಡಿದೆ.
ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಅನಾವರಣ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಗೈರಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಮ್ಮೆ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಇಂದು ಆಯೋಜಿಸಿದ್ದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬೆಳಿಗ್ಗೆ 9 ಗಂಟೆಗೆ ಆರಂಭವಾದ ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 13ನೇ ವಂಶಸ್ಥ ಯುವರಾಜ ಶಂಭುರಾಜೆ ಭೋಸಲೆ, ಲಾತೂರನ ಕಾಂಗ್ರೆಸ್ ಶಾಸಕ ಧೀರಜ್ ದೇಶಮುಖ, ಕೊಲ್ಲಾಪುರ ಶಾಸಕ ಸತೇಜ್‌ಉರ್ಫ ಬಂಟಿ ಪಾಟೀಲ ಸೇರಿದಂತೆ ಅನೇಕ ಗಣ್ಯರು ಶಿವಾಜಿಯ ಭವ್ಯ ಪ್ರತಿಮೆಯನ್ನು ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅದ್ಧೂರಿಯಾಗಿ ಆಚರಣೆ ಮಾಡಲಾದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಢೋಲ್‌ತಾಷಾ, ಹಲಗಿ ವಾದನ ಸೇರಿದಂತೆ ವಿವಿಧ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಹಾಗೂ ಧ್ವಜಾರೋಹಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ