ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್

ಬೆಂಗಳೂರು:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಕೇಂದ್ರದ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್‌ ದಾಖಲಾಗಿದೆ

ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ RP ಕಾಯ್ದೆಯ 123 (3A), 125 ಮತ್ತು 123 (3) ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳುನಾಡು ನಂಟು ಇದೆ ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ದೂರು ನೀಡಿತ್ತು. ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿತ್ತು.ಈ ವಿಷಯದ ಬಗ್ಗೆ 48 ಗಂಟೆಗಳ ಒಳಗೆ ವರದಿ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿತ್ತು.

Donate Janashakthi Media

Leave a Reply

Your email address will not be published. Required fields are marked *