ಶುಲ್ಕ ಏರಿಕೆ–ವಯೋಮಿತಿ ಗೊಂದಲ: ಬೆಂಗಳೂರಿನ ಪೋಷಕರಿಗೆ ಶಾಕ್!

ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ.

ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ ಆರೋಪ ಪೋಷಕರ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ವಯೋಮಿತಿ ಗೊಂದಲ: ಒಂದನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದ ಬಗ್ಗೆ ಪೋಷಕರಲ್ಲಿ ಇನ್ನೂ ಗೊಂದಲ ಮುಂದುವರಿದಿದೆ. ವಯೋಮಿತಿ ಸಡಿಲಿಕೆಯ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಸರಿಯಾದ ಮಾಹಿತಿ ಸಿಗದೆ ಪರದಾಡುವಂತಾಗಿದೆ.

ದಾಖಲಾತಿ ಪ್ರಕ್ರಿಯೆ: ವಾರ್ಷಿಕ ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಶಾಲೆಗಳಲ್ಲಿ ಹೊಸ ದಾಖಲಾತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಶುಲ್ಕ ಏರಿಕೆಯ ಬಿಸಿ ಪೋಷಕರಿಗೆ ತಟ್ಟುತ್ತಿದೆ.

ಪೋಷಕರ ಆತಂಕ: ಒಂದು ಕಡೆ ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಹಣ ಮೀಸಲಿಡಬೇಕಾದ ಅನಿವಾರ್ಯತೆ, ಇನ್ನೊಂದೆಡೆ ವಯೋಮಿತಿಯ ಕಾರಣದಿಂದ ಮಕ್ಕಳ ಪ್ರವೇಶ ವಿಳಂಬವಾಗಬಹುದು ಎಂಬ ಆತಂಕ ಪೋಷಕರನ್ನು ಕಾಡುತ್ತಿದೆ.

ಇದನ್ನೂ ನೋಡಿ: ಐವತ್ತೈದು ವಯಸ್ಸು, ಯುವಕನ ಉತ್ಸಾಹ: ಒಂಟಿ ಕಣ್ಣಿನ ಕೃಷ್ಣಮೂರ್ತಿ ಸಾಧನೆಯ ಪಯಣ Janashakthi Media

Donate Janashakthi Media

Leave a Reply

Your email address will not be published. Required fields are marked *