ಹಾಸನ :ಶೂಟೌಟ್‌ನಿಂದಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ಫೈರಿಂಗ್ ನಡೆದಿದ್ದು, ಸುತ್ತಮುತ್ತಲ ಜನರನ್ನು ಬೆಚ್ಚಿಬೀಳಿಸಿದೆ.
ಹಾಸನ ನಗರದ ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೊಯ್ಸಳನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ಗುಂಡಿನ ಗಾಯಗಳೊಂದಿಗೆ ಸಾವನ್ನಪ್ಪಿದ್ದು, ಇದು ಆಸ್ತಿ ವಿಚಾರಕ್ಕೆ ನಡೆದಿರುವ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನು ಓದಿ : ಎಲ್ಲ ದರ ಹೆಚ್ಚಳದಿಂದ ಬಡವರ ಮೇಲೆ ಹೊರೆ
ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಎಂಎಸ್ ಅವರ ಪ್ರಕಾರ, ಇಬ್ಬರು ವ್ಯಕ್ತಿಗಳು ಇಲ್ಲಿಯ ಹೊಯ್ಸಳನಗರಕ್ಕೆ ಕಾರಿನಲ್ಲಿ ಬಂದಿದ್ದರು ಮತ್ತು ಪ್ಲಾಟ್ ಬಳಿ ಯಾವುದೋ ವಿಷಯದ ಬಗ್ಗೆ ಮಾತಿನ ಚಕಮಕಿ ನಡೆಸುತ್ತಿದ್ದರು. ಈವೇಳೆ ಬುಲೆಟ್ ಹೊಡೆದ ಶಬ್ಧಗಳು ಕೇಳಿಸಿವೆ. ಒಬ್ಬ ವ್ಯಕ್ತಿ ಕಾರಿನ ಹೊರಗೆ ಮತ್ತು ಇನ್ನೊಬ್ಬರು ವಾಹನದೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಕಾರಿನೊಳಗೆ ಶವವಾಗಿ ಪತ್ತೆಯಾದ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಗುಂಡು ಹಾರಿಸಿ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾನೆ ಎನ್ನುವಂತೆ ಕಾಣುತ್ತಿದೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದರು.
ಇದನ್ನು ನೋಡಿ : ಅಂಗನವಾಡಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ – ಲಕ್ಷ್ಮೀ ಹೆಬ್ಬಾಳ್ಕರ್Janashakthi Media