ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಅಂಗಡಿ ವಾಹನಗಳಿಗೆ ಹಾನಿ; 60 ಮಂದಿ ಬಂಧನ

ಹಮದಾಬಾದ್: ಗಾಂಧಿನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಕೆರಳಿದ ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಹಲವು ಅಂಗಡಿಗಳು ಹಾಗೂ ವಾಹನಗಳಿಗೆ ಹಾನಿ ಮಾಡಿ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸೆಪ್ಟೆಂಬರ್‌ 25ರಂದು ಪೊಲೀಸರು ತಿಳಿಸಿದ್ದಾರೆ.

ದೇಘಂ ತಾಲ್ಲೂಕಿನ ಬಹಿಯಾಲ್ ಗ್ರಾಮದಲ್ಲಿ ಸೆಪ್ಟೆಂಬರ್‌ 24 ತಡರಾತ್ರಿ ಘರ್ಷಣೆ ಹಾಗೂ ಹಿಂಸಾಚಾರ ನಡೆದಿದ್ದೂ, ಭಾಗಿಯಾದ ಆರೋಪದಲ್ಲಿ 60 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಐದು ಅಂಗಡಿಗಳು ಹಾಗೂ 6 ವಾಹನಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಿಸಲು ಕಾನೂನು ಸೇವಗಳ ಪ್ರಾಧಿಕಾರ ತೀರ್ಮಾನ

ಸದ್ಯ ನಡೆಯುತ್ತಿರುವ ‘ಐ ಲವ್ ಮೊಹಮ್ಮದ್’ ಟ್ರೆಂಡ್ ಬಗ್ಗೆ ಹಿಂದೂ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆಕ್ಷೇಪಾರ್ಹ ಪೋಸ್ಟ್ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಗಾಂಧಿನಗರ ಪೊಲೀಸ್ ವರಿಷ್ಠಾಧಿಕಾರಿ ತೇಜ ವಸಂಸೆಟ್ಟಿ ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಾಟ್ಸ್‌ಆಯಪ್‌ನಲ್ಲಿ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ವ್ಯಕ್ತಿಯ ಅಂಗಡಿಯ ಷಟರ್ ಮುರಿದ ಆಕ್ರೋಶಿತ ಗುಂ‍ಪು ವಸ್ತುಗಳನ್ನೆಲ್ಲಾ ಹೊರಗೆ ಎಸೆದು ಬೆಂಕಿ ಹಚ್ಚಿದೆ ಎಂದು ಅವರು ತಿಳಿಸಿದ್ದಾರೆ.

ಬಳಿಕ ಗುಂಪು, ಹಿಂದೂ ಪ್ರದೇಶಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತೀಕಾರವಾಗಿ ಆ ಕಡೆಯಿಂದಲೂ ಕಲ್ಲು ತೂರಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ‘ನ್ಯಾಯ ಸಮಾವೇಶ’ದ ನೇರ ಪ್ರಸಾರ

Donate Janashakthi Media

Leave a Reply

Your email address will not be published. Required fields are marked *