ಅಂಗಡಿ ಕಳ್ಳತನ ನೋಡಿದನೆಂದು ಮಾಲೀಕನ ಹತ್ಯೆ

ಮಂಡ್ಯ: ಗ್ಯಾಸ್ ಕಟರ್ ಬಳಸಿ ಒಡವೆ ಅಂಗಡಿ ರಾಬರಿ ಮಾಡುತ್ತಿದ್ದ ವೇಳೆ, ಅದನ್ನು ನೋಡಿದ ಹೋಟೆಲ್ ಮಾಲೀಕನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಭಯಾನಕ ಘಟನೆಯೊಂದು ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಖದೀಮರು ರಾಬರಿ ಮಾಡುತ್ತಿದ್ದದ್ದನ್ನು ಹೋಟೆಲ್ ಮಾಲೀಕ ನೋಡಿದ್ದಾನೆಂಬ ಕಾರಣಕ್ಕೆ ಆತನನ್ನು ಕೊಲೆ ಮಾಡಿದ್ದಾರೆ. ಮಹದೇವಪ್ಪ (55) ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನಾಕಾರಿ ಹೇಳಿಕೆ ಕಾನೂನು ಕ್ರಮಕೈಗೊಳ್ಳಲಾಗುವುದು ಸಚಿವ ಎಂ.ಬಿ.ಪಾಟೀಲ

ಖದೀಮರು ಗ್ಯಾಸ್ ಕಟರ್ ಬಳಸಿ ರಾಬರಿ ಮಾಡುತ್ತಿದ್ದ ವೇಳೆ ಪಕ್ಕದ ಹೋಟೆಲ್ ಮಾಲೀಕ ಹೊರಗೆ ಬಂದಿದ್ದಾರೆ. ಇದನ್ನು ಕಂಡ ಖದೀಮರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ: ʼಒಳಮೀಸಲಾತಿಯ ಕಿಚ್ಚು ನಿಮ್ಮ ಪಕ್ಷವನ್ನು ಸುಟ್ಟು ಹಾಕುತ್ತದೆʼ, ದಲಿತ ನಾಯಕರಿಂದ ಸರಕಾರಕ್ಕೆ ಎಚ್ಚರಿಕೆJanashakthi

Donate Janashakthi Media

Leave a Reply

Your email address will not be published. Required fields are marked *