ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಟೆಸ್ಟ್ ತಂಡದ ನಾಯಕರಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಮೇ 24 ಶನಿವಾರದಂದು ರಾಜ್ಯದಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18 ಆಟಗಾರರ ತಂಡವನ್ನು ಪ್ರಕಟಿಸಲಾಯಿತು.
ಜೂನ್ 20ರಿಂದ ಪ್ರಾರಂಭವಾಗುವ ಸರಣಿಗೆ ಭಾರತ ತಂಡದ ಉಪ ನಾಯಕರಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದು, ಕನ್ನಡಿಗರಾದ ಕೆ.ಎಲ್. ರಾಹುಲ್, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣ ತಂಡದಲ್ಲಿದ್ದಾರೆ.
ಇದನ್ನೂ ಓದಿ: ಟ್ರಂಪ್ನ 25% ಟ್ಯಾರಿಫ್ ಘೋಷಣೆ: ಆಪಲ್ನ ‘ಮೇಕ್ ಇನ್ ಇಂಡಿಯಾ’ ಯೋಜನೆಗೆ ಹೊಡೆತ
ಅಂತರರಾಷ್ಟೀಯ ಟೆಸ್ಟ್ ಕ್ರಿಕೆಟ್ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ತಂಡಕ್ಕೆ ಹೊಸ ನಾಯಕ ಯಾರಾಗಬಹುದು ಎನ್ನುವ ಕುತೂಹಲ ಕ್ರಿಕೆಟ್ ಪ್ರೇಮಿಗಳಿಗಿತ್ತು. ಇಂಗ್ಲೆಂಡ್ ವಿರುದ್ಧ ತಂಡ ಪ್ರಕಟವಾಗುವ ಮೂಲಕ, ಕುತೂಹಲಕ್ಕೆ ತೆರೆ ಬಿದ್ದಿದೆ.
ಭಾರತ ತಂಡ
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್/ ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ದೃವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಬೂಮ್ರಾ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.
ಇದನ್ನೂ ನೋಡಿ: ಆರೋಗ್ಯ ಹಕ್ಕು – ಸರಣಿ ಕಾರ್ಯಕ್ರಮ| ಅಲ್ಮಾ-ಅಟಾ ಘೋಷಣೆ ಏನು? ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆ ಸಂಚಿಕೆ 03