ಮೋದಿ ಪ್ರಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಸರಕಾರವನ್ನು ವಜಾ ಮಾಡಲಿ – ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ಬಿಜೆಪಿಯ ಭ್ರಷ್ಟ ಸರ್ಕಾರವನ್ನು ವಜಾ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ 40% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ಒಂದು ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ ಈ ಕುರಿತು ಪ್ರಧಾನಿಯವರು ಮೌನ ಮುರಿಯಬೇಕು ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ನಡೆದಿರುವ ಟೆಂಡರ್ ಗಳೂ ಸೇರಿ ಈ ವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 40% ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ.
ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ? ಎಂದು ಪ್ರಶ್ನಿಸಿದ್ದಾರೆ.

ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು
ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ.
ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ.
ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *