ಲಾಲಾ ಭಾಗ|ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು

ಬೆಂಗಳೂರು:  ಸಸ್ಯಕಾಶಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ-2025ಕ್ಕೆ ಚಾಲನೆ ಸಿಕ್ಕಿದೆ. ಈ ಬಾರಿಯ ವಿಶೇಷ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವಾಗಿದೆ. ಆಗಸ್ಟ್‌ 7 ರಿಂದ 18ರ ತನಕ ಜನರು ಫಲಪುಷ್ಪ ಪ್ರದರ್ಶನವನ್ನು ವೀಕ್ಷಣೆ ಮಾಡಬಹುದು.  ಬೆಂಗಳೂರು

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.

ಲಾಲಾ ಭಾಗ|ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
ಲಾಲಾ ಭಾಗ|ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು

ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಮೂಡಿಬಂದಿದೆ. ಈ ಬಾರಿಯ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ : ಬಿಹಾರದ 2 ಕೋಟಿ ಮತದಾರರಿಗೆ ‘ವೋಟ್‍ಬಂದಿ’ ಭೀತಿ – ಆಧಾರ್ ಏಕಿಲ್ಲ ಚುನಾವಣಾ ಆಯೋಗಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಬೆಂಗಳೂರು

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 7 ರಿಂದ 18ರ ವರೆಗೆ ನಡೆಯಲಿದೆ. ಜನರು ಬಿಎಂಟಿಸಿ ಬಸ್, ಖಾಸಗಿ ವಾಹನ, ನಮ್ಮ ಮೆಟ್ರೋ ಮೂಲಕ ಸುಲಭವಾಗಿ ಲಾಲ್‌ಬಾಗ್ ತಲುಪಬಹುದು. ವಾಹನಗಳ ಪಾರ್ಕಿಂಗ್ ಕುರಿತು ಈಗಾಗಲೇ ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು

ಇದನ್ನೂ ನೋಡಿ : ಎದೆಗೆ ನಾಟುವ ಸಿನಿಮಾ – ಹೆಬ್ಬುಲಿ ಕಟ್ – ಚಂದ್ರಪ್ರಭ ಕಠಾರಿ Janashakthi Media

Donate Janashakthi Media

Leave a Reply

Your email address will not be published. Required fields are marked *