ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಸಿದ್ಧರಾಮಯ್ಯ ಸರ್ಕಾರ: ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು 2023-24ನೇ ಸಾಲಿನಲ್ಲಿ 3,24,478 ಕೋಟಿ ರೂ. ಗಾತ್ರದ ಬಜೆಟ್‌ ಮಂಡನೆ ಮಾಡಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚಿನ ಅನುದಾನ ಬೇಕಿದ್ದರಿಂದ ಅಬಕಾರಿ ಸುಂಕವನ್ನು ಶೇ.20 ಹೆಚ್ಚಳ ಮಾಡುವ ಮೂಲಕ ಮದ್ಯದ ದರವನ್ನು ಹೆಚ್ಚಳ ಮಾಡಿದ್ದಾರೆ.

ಇದನ್ನೂಓದಿ:Karnataka Budget 2023-24 | ಬೆಳಕಿಲ್ಲದ ಹಾದಿಯಯಲ್ಲಿ ನಡೆಯಬಹುದು; ಕನಸುಗಳೆ ಇಲ್ಲದ ದಾರಿಯಲ್ಲಿ ಹೇಗೆ ನಡೆಯಲಿ!

ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *