ಬೆಂಗಳೂರು:ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು,ಐದು ವರ್ಷಪೂರ್ಣಗೊಳಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ. ಶಿಂಧೆ
ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಸಿದ್ದರಾಮಯ್ಯ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಪಕ್ಷದ್ರೋಹಿ ಶಿಂಧೆಯ ಪಕ್ಷ ಈ ಲೋಕಸಭಾ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ ಎಂದಿದ್ದಾರೆ.
ಇದನ್ನು ಓದಿ : ಬಿಟ್ ಕಾಯಿನ್ ಹಗರಣ: ಡಿಜೆಪಿ ದರ್ಜೆಯ ಅಧಿಕಾರಿಯೊಬ್ಬರ ಮಗನ ವಿಚಾರಣೆ
ಬಿಜೆಪಿ ನಾಯಕರನ್ನುದ್ದೇಶಿ ಹೇಳಿರುವ ಸಿಎಂ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದಿದ್ದಾರೆ.
ಇದನ್ನು ನೋಡಿ : ಎರಡು ಕೋಟಿ ಉದ್ಯೋಗ : ಎಲ್ಲಿ ಹೋದವು? ಮೋದಿ ಸರ್ಕಾರದ ಉತ್ತರವೇನು? Janashakthi Media