ಕೋಲಾರ: ನನ್ನ ಅಧಿಕಾರವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.
ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ಅನೇಕ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಈಗ ಲಂಚ ಕೊಡದಿದ್ದರೆ ಯಾವುದೇ ಕೆಲಸವಾಗುವುದಿಲ್ಲ. ಬಿಜೆಪಿಯಂತಹ ಭ್ರಷ್ಡ ಸರ್ಕಾರ ರಾಜ್ಯದಲ್ಲಿ ಯಾವತ್ತೂ ಬಂದಿರಲಿಲ್ಲ. ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದಿದ್ದರು. 40% ಕಮಿಷನ್ ಬಗ್ಗೆ ವಿಧಾನಮಂಡಲದ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದರು.
ಇದನ್ನು ಓದಿ: ಬಿಜೆಪಿ ಪಕ್ಷ ಸೋಲಿನ ಭಯದಿಂದ ಬಿಬಿಎಂಪಿ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿಯವರು ಹೆದರಿಕೊಂಡು ವಾರಕ್ಕೊಂದು ಸಲ ಮೋದಿಯವರನ್ನು ಕರೆಸುತ್ತಿದ್ದಾರೆ. ನೂರು ಸಾರಿ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದು ಪ್ರಚಾರ ಮಾಡಿದರೂ ಏನೂ ನಡೆಯುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಂಡಿತ. ನಾವು ನಿರೀಕ್ಷೆ ಮಾಡಿದಕ್ಕಿಂತ ಹೆಚ್ಚು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದಾರೆ. ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸರಗೊಂಡಿದ್ದಾರೆ ಎಂದರು.
ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಪ್ರಸ್ತಾಪಿಸಿದ ಸಿದ್ದರಾಮಯ್ಯ ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಈಗಾಗಲೇ ಹೇಳಿರುವಂತೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಪಕ್ಷದ ಹೈಕಮಾಂಡ್ ಸೂಚಿಸಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ