ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿಐಎಸ್ ತಂತ್ರಾಂಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಲೋಕಾರ್ಪಣೆ ಮಾಡಿದರು.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮದ ಸಂದರ್ಭದಲ್ಲಿ ಪೋರ್ಟಲ್ ಅನ್ನು ಲೋಕಾರ್ಪಣೆ ಮಾಡಿದರು. ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲ ಇಲಾಖೆಗಳ 1 ಕೋಟಿ ರೂಗಳಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್ ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.
ಗಾಮೀಣಾಭಿವೃದ್ಧಿ ಜಲಸಂಪನ್ಮೂಲ ಲೋಕೋಪಯೋಗಿ ಇಲಾಖೆ ಮತ್ತು ಅದರ ನಿಗಮಗಳಡಿ ನೀಡಲಾದ 50 ಲಕ್ಷ ರೂ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲ ಟೆಂಡರ್‌ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‌ನ್ನು ಹೆಚ್ಚಿನ ಪಾರದರ್ಶಕತೆ ನಿರ್ವಹಣಾ ಮಾಡ್ಯೂಲ್‌ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಅದರಂತೆ ಇ-ಪ್ರೊಕ್ಯೂರ್ಮೆಂಟ್ ವೇದಿಕೆಯಲ್ಲಿ ಒಟ್ಟು ಸಾವಿರ ಟೆಂಡರ್‌ಗಳು ಪ್ರಕಟಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ 50 ಲಕ್ಷ ರೂಗಳಿಗಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್‌ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಲಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್‌ನಲ್ಲಿ ಅಳವಡಿಸಲಾಗುವುದು.
ಇದನ್ನೂ ಓದಿ: 2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ
ಇ-ಸಂಗ್ರಹಣಾ ಪೋರ್ಟಲ್ 2.0 ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಒಳಗೊಂಡಿದೆ. ಡಿಜಿಟಲ್ ಕೀಲಿ ಹೊಂದಿರುವವರಷ್ಟೇ ಪೋರ್ಟಲ್ ಪ್ರವೇಶಿಸಬಹುದು. ದರ ಸಂಧಾನ. ಗುತ್ತಿಗೆ ಅನುಮೋದನೆ, ಕಾರ್ಯಾದೇಶ ವಿತರಣೆ, ಕಾಮಗಾರಿಗಳ ಮೇಲೆ ನಿಗಾ ಇರಿಸುವ ಕೆಲಸಗಳನ್ನು ಪೋರ್ಟಲ್ ಮೂಲಕವೇ ನಡೆಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಹೆಚ್ಚವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಇ-ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಡಿಯೋ ನೋಡಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ?) ಬಹಿರಂಗ ಚರ್ಚೆಗೆ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರ ವಿರೋಧ ಯಾಕೆ?