ಮೈಸೂರು: ದಸರಾ ಬಳಿಕ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ದಸರಾ
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, “ನನಗಿರುವ ಮಾಹಿತಿ ಪ್ರಕಾರ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ನಲ್ಲಿ ಗಂಭೀರ ಚರ್ಚೆ ನಡೆದಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.
“ಮುಡಾ ವಿಚಾರದಲ್ಲಿ ನಮ್ಮ ಪಕ್ಷ ಪಾದಯಾತ್ರೆ ಮಾಡಿತು. ಅದರ ಪರಿಣಾಮ ಪ್ರತಿನಿತ್ಯ ನಾನೇ ಮುಖ್ಯಮಂತ್ರಿ ಎಂದು ಹೇಳುವ ಕೆಟ್ಟ ಪರಿಸ್ಥಿತಿ ಸಿದ್ದರಾಮಯ್ಯನವರಿಗೆ ಬಂದಿದೆ. ಮತ್ತೊಂದು ಕಡೆ ಸಚಿವರು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಮಾತೇ ಇಲ್ಲ. ಈ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಸಿದ್ದರಾಮಯ್ಯನವರೇ ದೆಹಲಿಗೆ ಕಳುಹಿಸಿದ್ದರು. ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ಕೊಡಬಹುದು” ಎಂದರು.
ಇದನ್ನು ಓದಿ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀ ಬಿಡುಗಡೆ ಆದೇಶಿಸಿದ ಕೋರ್ಟ್
“ನಮ್ಮ ಉದ್ದೇಶ ಸಿದ್ದರಾಮಯ್ಯನವರನ್ನು ಮಾತ್ರ ಕೆಳಗಿಳಿಸುವುದಲ್ಲ. ಇಡೀ ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿದೆ. ಈಗಾಗಲೇ ದಸರಾ ಬಳಿಕ ಮುಖ್ಯಮಂತ್ರಿಗಳು ರಾಜೀನಾಮೆ ಕೊಡುತ್ತಾರೆ ಎಂಬ ಮಾಹಿತಿ ಬರುತ್ತಿದೆ. ಕಾಂಗ್ರೆಸ್ನಲ್ಲಿ ಏಳೆಂಟು ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದಾರೆ. ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡುತ್ತದೆ” ಎಂದು ಹೇಳಿದರು.
ಮುಡಾ ಹಗರಣದ ಕಾವು ತೀವ್ರಗೊಂಡಿರುವ ಹೊತ್ತಿನಲ್ಲೇ ಮಲ್ಲಿಕಾರ್ಜುನ್ ಖರ್ಗೆಯವರನ್ನು ಸಚಿವ ಸತೀಶ್ ಜಾರಕಿಗೋಳಿ ಭೇಟಿ ಮಾಡಿರುವುದು ಇದೀಗ ಭಾರೀ ಮಹತ್ವ ಪಡೆದಿದೆ. ಕೆಲವು ಮಹತ್ವದ ಸಂದೇಶ ಹೊತ್ತು ದೆಹಲಿಗೆ ತೆರಳಿದ್ದ ಜಾರಕಿಹೊಳಿ, ಅದನ್ನು ಐಸಿಸಿ ಅಧ್ಯಕ್ಷರಿಗೆ ತಲುಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿಗೆ ಸಿಎಂ ಸ್ಥಾನ ಸಿಗಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನ ಸಮುದಾಯಕ್ಕೆ ಪಡೆಯುವ ಬಗ್ಗೆ ಚರ್ಚೆ, ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುವುದು ಅಂತ ತೀರ್ಮಾನಿಸಲಾಗಿದೆ.
ಒಂದು ವೇಳೆ ಬದಲಾವಣೆಯಾದರೆ ಸಮುದಾಯಕ್ಕೆ ಸಿಎಂ ಅವಕಾಶ ತಪ್ಪದಂತೆ ನೋಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ದಲಿತ ಸಮುದಾಯಕ್ಕೆ ಸಿಎಂ ಅವಕಾಶ ತಪ್ಪದಂತೆ ಅಪಸ್ವರ ಇಲ್ಲದಂತೆ ಒಟ್ಟಾಗಿ ನಿಲ್ಲುವ ಬಗ್ಗೆ ಸಮಾಲೋಚನೆ. ಇದೇ ಸಂದೇಶದೊಂದಿಗೆ ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ, ಖರ್ಗೆ ಜೊತೆ ಮಹತ್ವದ ಮಾತುಕತೆ.
ಇದನ್ನು ನೋಡಿ : ಮೀಸಲಾತಿ ವಿರುದ್ಧ ಬಿಜೆಪಿ, ಸಂಘಪರಿವಾರ ಮಾಡುತ್ತಿರುವ ಷಡ್ಯಂತ್ರ ಎಲ್ಲರಿಗೂ ತಿಳಿದಿದೆ Janashakthi Media