ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೇರಲಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ ಎಂದು ಮೇ 28ರಂದು ಸಿಎಂ ಸಿದ್ದರಾಮಯ್ಯನವರ ಅಧಿಕೃತ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಉಪಹಾರ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ರಾಜೀನಾಮೆ
“ಮುಖ್ಯಮಂತ್ರಿಗಳು 3 ಗಂಟೆಗೆ ರಾಜೀನಾಮೆ ನೀಡುತ್ತಾರೆ. ಡಿ.ಕೆ.ಶಿವಕುಮಾರ್ ಅವರನ್ನು ಹೊಸ ಸಿಎಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಿಕೆಶಿ ಅವರೇ ಸಿಎಂ ಆಗುತ್ತಾರೆ. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿದ್ದಾರೆ ” ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ 11 ದಿನಗಳಲ್ಲಿ 4 ಬಾರಿ ಹೆಚ್ಚಳ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ – ಜನತೆ ತತ್ತರ
ಇದೇ ವೇಳೆ, ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗುವುದಿಲ್ಲ ಎಂದು ಹೆಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು.
ಸಚಿವ ಈಶ್ವರ್ ಖಂಡ್ರೆ ಮಾತನಾಡಿ, “ಇಷ್ಟು ವರ್ಷಗಳ ಕಾಲ ನಮಗೆ ಮಾರ್ಗದರ್ಶನ ನೀಡಿದ್ದಕ್ಕಾಗಿ ನಾವೆಲ್ಲರೂ ಸಿಎಂಗೆ ಧನ್ಯವಾದ ಹೇಳಿದ್ದೇವೆ. ಅವರು ನಿಮ್ಮೊಂದಿಗೆ(ಮಾಧ್ಯಮದವರೊಂದಿಗೆ) ಮಾತನಾಡುತ್ತಾರೆ” ಎಂದರು.
ಇದನ್ನೂ ನೋಡಿ: FIR ಎಂದರೆ ಏನು? ಯಾವಾಗ, ಹೇಗೆ ದಾಖಲಿಸಬೇಕು? ವಿಶ್ಲೇಷಣೆ : ಶಶಿಧರ, ವಕೀಲರುJanashakthi Media
