ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಇದನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಸಂಸದ
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಈಗಾಗಲೆ ವಾರಂಟ್ ಜಾರಿ ಆಗಿದೆ. ಅದರ ಆಧಾರದ ಮೇಲೆ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಕೋರಿ ಪತ್ರ ಬರೆಯಲಾಗಿದೆ. ಪಾಸ್ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ಭಾರತಕ್ಕೆ ಬರಬೇಕಾಗುತ್ತದೆ ಎಂದರು.
ಇದನ್ನೂ ಓದಿ: ತಾಪಮಾನ ಕುಸಿತ, ಮಳೆಯು ಮೇ 23 ರವರೆಗೆ ಮುಂದುವರಿಕೆ : ಐಎಂಡಿ
ವಕೀಲ ದೇವರಾಜೇಗೌಡ ಆಡಿಯೋ ಬಗ್ಗೆ ಎಸ್ಐಟಿ ನೋಡಿಕೊಳ್ಳಲಿದ್ದು, ತನಿಖೆ ನಡೆಯುತ್ತಿರುವುದರಿಂದ ಪ್ರತಿ ಹಂತದ ಮಾಹಿತಿ ನೀಡಲಾಗಿಲ್ಲ. ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಗೃಹ ಸಚಿವರು ಉತ್ತರಿಸಿದರು.
ಎಚ್.ಡಿ ದೇವೇಗೌಡರ ಕುಟುಂಬ ಮುಗಿಸಲು ಷಡ್ಯಂತ್ರ್ಯ ನಡೆಸಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಎಚ್ ಡಿ ಕುಮಾರಸ್ವಾಮಿ ಅವರು ಯಾವ ಉದ್ದೇಶದಿಂದ ಹೇಳಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಕೆಲಸ ಇದೆ. ಆಡಳಿತ ಮಾಡಬೇಕು. ಇಡೀ ದೇಶ ನಮ್ಮ ಕಾಂಗ್ರೆಸ್ ಸರ್ಕಾರದ ಕಡೆ ನೋಡುತ್ತಿದೆ ಎಂದು ಹೇಳಿದರು.
ಇದನ್ನೂ ನೋಡಿ: ಪೆನ್ ಡ್ರೈವ್ ಪ್ರಕರಣ ದಿಕ್ಕು ತಪ್ಪುತ್ತಿದೆ, ಸಾಕ್ಷಿ ನಾಶ ಸಾಧ್ಯತೆ – ವಕೀಲ ಸಿ ಎಚ್. ಹನುಮಂತರಾಯ ಆರೋಪ