- ಶಿಕ್ಷಕರ ದಿನಾಚರಣೆ ಶುಭಾಶಯಗಳು
- ಶಿಕ್ಷಣ ಮತ್ತು ಶಿಕ್ಷಕರಿಗೆ ನೆರವು ನೀಡಲು ಡಿಕೆಶಿ ಒತ್ತಾಯ
ಬೆಂಗಳೂರು: ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಬಹುಮುಖ್ಯವಾದ ಪಾತ್ರ ಶಿಕ್ಷಕರದ್ದು. ಉತ್ತಮ ವ್ಯಕ್ತಿತ್ವ ರೂಪಿಸಿಕೊಡುವಲ್ಲಿ ಮಾರ್ಗದರ್ಶಕರಾಗಿರುವ ಶಿಕ್ಷಕರ ನೆನೆಯುವ ಮಹತ್ವದ ದಿನವಿಂದು.
ದೇಶದಲ್ಲಿ ಪ್ರತಿವರ್ಷವೂ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ವರ್ಷವೂ ಕೋರೊನ ಸಂಕ್ರಾಮಿಕ ಸೋಂಕಿ ಮತ್ತು ಲಾಕ್‍ಡೌನ್ ನಿಂದಾಗಿ ಶಿಕ್ಷಕರ ವೃಂದವು ಇಂದು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕೆಲಸವಿಲ್ಲದೆ, ಸಂಬಂಳವಿಲ್ಲದೆ ಜೀವನ ನಡೆಸಲು ಸಾಧ್ಯವಾಗದೇ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ಅನೇಕ ಗಣ್ಯರು, ರಾಜಕಾರಣಗಳು ಸೇರಿದಂತೆ ಶಿಕ್ಷಕರಿಗೆ ಶುಭಾಶಯ ಕೋರಿದ್ದು, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ ಶಿಕ್ಷಕರಿಗೆ ಟ್ವಿಟ್ ಮೂಲಕ ಶುಭಾಶಯ ಕೋರಿದ್ದು ಕೋರೊನಾ ಮತ್ತು ಲಾಕ್ ಡೌನ್ ನಿಂದಾಗಿ ಖಾಸಗಿ ಶಾಲೆಗಳ 40,000ಕ್ಕೂ ಹೆಚ್ಚು ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. 2,00,000 ಹೆಚ್ಚು ಶಿಕ್ಷಕರಿಗೆ ಸಂಬಳವಿಲ್ಲದೇ ಒದ್ದಾಡುತ್ತಿದ್ದಾರೆ. ಶಿಕ್ಷಕರ ಪರಿಸ್ಥಿತಿಯ ಬಗ್ಗೆ ಸರಕಾರ ಗಮನ ಹರಿಸುತ್ತಿಲ್ಲ ಎಂದು ಸರ್ಕಾರಕ್ಕೆ ಛೇಡಿಸಿದ್ದಾರೆ.
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರಿಂದು ತರಕಾರಿ ವ್ಯಾಪರ, ಹೂವಿನ ವ್ಯಾಪಾರಂತ ತಳ್ಳುಗಾಡಿ ಹಿಡಿದು ವ್ಯಾಪಾರ ನಡೆಸುತ್ತಿದ್ದಾರೆ. ಗಾರೆ ಕೆಲಸ ಮಾಡುವ ಪರಿಸ್ಥಿತಿ ಬಂದು ತಪುಪಿದೆ.
ರಾಜ್ಯದ 80 ಲಕ್ಷ ವಿದ್ಯಾರ್ಥಿಗಳ ಪೈಕಿ 62.5% ಮಕ್ಕಳಿಗೆ ಮಾತ್ರ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ನ ಲಭ್ಯತೆ ಇದೆ. 53.75% ಮಕ್ಕಳಿಗೆ ಮಾತ್ರ ಇಂಟರ್ನೆಟ್ ಸಂಪರ್ಕ ಲಭ್ಯವಿದೆ. ಈ ಎಲ್ಲಾ ತಂತ್ರಜ್ಞಾನದ ಲಭ್ಯತೆ ಇಲ್ಲದ ಮಕ್ಕಳು ಆನ್‌ಲೈನ್ ಶಿಕ್ಷಣ ಪಡೆಯುವುದಾದರೂ ಹೇಗೆ? ಎಂದು ಸರ್ಕಾರಕ್ಕೆ ಪ್ರಶ್ನೆಸಿದ್ದಾರೆ.
ಈ ಕುರಿತಂತೆ ಸರ್ಕಾರ ಈ ಕೂಡಲೇ ಶಿಕ್ಷಣ ವ್ಯವಸ್ಥೆಯನ್ನು ಸರಿ ದಾರಿಗೆ ತಂದು ಹಾಗೂ ಶಿಕ್ಷಕರಿಗೆ ನೆರವಾಗಬೇಕೆಂದು ಆಗ್ರಹಿಸಿದ್ದಾರೆ.