ನವದೆಹಲಿ: ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದ ವೇಳೆ ಸರಣಿ ಸಂವಾದಗಳನ್ನು ನಡೆಸುತ್ತಿದ್ದು, ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಸಿಖ್ ಸಮುದಾಯದ ಕುರಿತು ಹೇಳಿಕೆ ನೀಡಿದ್ದರು.
ಬಿಜೆಪಿ ಸೇರಿದಂತೆ ಸಿಖ್ ಸಂಘಟನೆಗಳ ಆಕ್ರೋಶಕ್ಕೆ ಈ ಹೇಳಿಕೆ ಗುರಿಯಾಗಿತ್ತು. ರಾಹುಲ್ ತಮ್ಮ ಹೇಳಿಕೆ ಸಂಬಂಧ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ದೆಹಲಿಯಲ್ಲಿ ಸಿಖ್ ಸಂಘಟನೆ ಪ್ರತಿಭಟನೆ ನಡೆಸುತ್ತಿತ್ತು. ಇದರಲ್ಲಿ ಭಾಗಿಯಾಗಿದ್ದ ಹಿರಿಯ ಬಿಜೆಪಿ ನಾಯಕ, ಮಾಜಿ ಶಾಸಕ ತರ್ವಿಂದರ್ ಸಿಂಗ್ ಮರ್ವಾ ಮಾತನಾಡಿದ್ದು ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿ ಇದೆಯೇ?
ರಾಹುಲ್ ಗಾಂಧಿ ಮಾತನಾಡಬೇಕಾದರೆ ಎಚ್ಚರವಹಿಸಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಅಜ್ಜಿಗೆ ಬಂದ ಪರಿಸ್ಥಿತಿ ನಿಮಗೆ ಬರುತ್ತದೆ ಎಂದು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
1984ರಲ್ಲಿ ನಡೆದ ಬ್ಲೂ ಸ್ಟಾರ್ ಕಾರ್ಯಾಚರಣೆ ಬಳಿಕ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರನ್ನು ಅವರ ಅಂಗರಕ್ಷಕರೇ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅಮೆರಿಕ ಪ್ರವಾಸದ ವೇಳೆ ಧಾರ್ಮಿಕ ಅಸಹಿಷ್ಣತೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಈ ಹೋರಾಟ ಏನೆಂಬುದನ್ನು ಅರ್ಥಮಾಡಿಕೊಳ್ಳಬೇಕು.
ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ, ಸಿಖ್ಖರಿಗೆ ಮಾತ್ರವಲ್ಲ ಎಲ್ಲ ಧರ್ಮದವರಿಗೂ ಸಂಬಂಧಿಸಿದ್ದು. ಒಂದು ವೇಳೆ ಪೇಟವನ್ನು ಧರಿಸಿ ಗುರುದ್ವಾರಕ್ಕೆ ಹೋಗಲು ಅನುಮತಿಸಲಾಗುವುದೇ ಎಂದು ಕೇಳುವ ಮೂಲಕ ರಾಹುಲ್ ಗಾಂಧಿ ವಿವಾದದ ಕಿಡಿ ಹೊತ್ತಿಸಿದ್ದರು.
ಇದನ್ನೂ ನೋಡಿ: ಕಾಂಪ್ಲೆಕ್ಸ್ ತೆಗೆದು ಮಾಲ್ ಮಾಡಿದ್ರೆ ಜನರ ಆರೋಗ್ಯ ಹಾಳಾಗುತ್ತೆ | ಬಿಡಿಎ ನಮ್ಮ ಸ್ವತ್ತು ಖಾಸಗೀಯವರಿಗೆ ಕೊಡೋದಿಲ್ಲ