ಸಿಕ್ಕಿಂ,ಹಿಮಾಚಲ ಪ್ರದೇಶ ದುರಂತ:ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಖರ್ಗೆ ಒತ್ತಾಯ

ನವದೆಹಲಿ: ಸಿಕ್ಕಿಂನಲ್ಲಿ ಮೇಘ ಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾದ ಸಾವು ನೋವುಗಳಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿಮಾಚಲ ಪ್ರದೇಶದಲ್ಲಿ ಇತ್ತೀಚಿಗೆ ಆದ ಮಳೆ ಸಂಬಂಧಿತ ಅನಾಹುತಗಳು ಸೇರಿದಂತೆ ಇಂತಹ ದುರಂತಗಳನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ  ಘೋಷಿಸಬೇಕು  ಎಂದು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್  ಹಂಚಿಕೊಂಡಿರುವ ಖರ್ಗೆ, ಸಿಕ್ಕಿಂನಲ್ಲಿ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದಿಂದಾಗಿ ಹಲವಾರು ಮಂದಿ ಪ್ರಾಣ ಕಳೆದುಕೊಂಡಿರುವುದು ಮತ್ತು ನಮ್ಮ ವೀರ ಸೈನಿಕರು ಸೇರಿದಂತೆ ಹಲವರು ನಾಪತ್ತೆಯಾಗಿರುವುದರಿಂದ ಪರಿಸ್ಥಿತಿ ಅನಿಶ್ಚಿತವಾಗಿದೆ. “ಸುರಕ್ಷಿತ ಸ್ಥಳಗಳಲ್ಲಿ ಜನರನ್ನು ರಕ್ಷಿಸಲು ಮತ್ತು ಕಾಣೆಯಾದವರನ್ನು ಹುಡುಕಲು ಕೇಂದ್ರವು ಸಾಧ್ಯವಿರುವ ಎಲ್ಲ ಕಾರ್ಯ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಸಿಕ್ಕಿಂ ಮೇಘಸ್ಪೋಟ : ಸರ್ಕಾರದ ಜೊತೆ ಕೈ ಜೋಡಿಸುವಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಹುಲ್‌ಗಾಂಧಿ ಮನವಿ

ಮೂಲಸೌಕರ್ಯಕ್ಕೆ ಸಾಕಷ್ಟು ಹಾನಿಯಾಗಿದೆ ಮತ್ತು ಈ ಸುಂದರ ರಾಜ್ಯವನ್ನು ಪುನರ್ನಿರ್ಮಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಧ್ಯಮ ಮತ್ತು ದೀರ್ಘಾವಧಿಯಲ್ಲಿ ಒಟ್ಟಾಗಿ ಕೆಲಸ ಮಾಡಬೇಕು.” ಈ ಮಾನವೀಯ ಬಿಕ್ಕಟ್ಟಿನಲ್ಲಿ ಕಾಂಗ್ರೆಸ್ ಮತ್ತು ಕಾರ್ಯಕರ್ತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯವನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಿಕ್ಕಿಂ ಮತ್ತು ಹಿಮಾಚಲ ಪ್ರದೇಶದಂತಹ ದುರಂತಗಳನ್ನು ರಾಷ್ಟ್ರೀಯ ವಿಪತ್ತುಗಳೆಂದು ಘೋಷಿಸಬೇಕು, ಇದರಿಂದಾಗಿ ಈ ರಾಜ್ಯಗಳು ತಮ್ಮನ್ನು ಹೆಚ್ಚು ಸಮರ್ಥನೀಯವಾಗಿ ಪುನರ್ ನಿರ್ಮಿಸಿಕೊಳ್ಳುವಲ್ಲಿ ಸಾಕಷ್ಟು ಹಣವನ್ನು ಪಡೆಯುತ್ತವೆ” ಎಂದು ಹೇಳಿದರು.

ವಿಡಿಯೋ ನೋಡಿ: ICC World Cup 2023: ಇಂದಿನಿಂದ ಕ್ರಿಕೆಟ್ ವಿಶ್ವಕಪ್‌‌ ಆರಂಭJanashakthi Media

Donate Janashakthi Media

Leave a Reply

Your email address will not be published. Required fields are marked *