ಟೋಕಿಯೋ ಒಲಿಂಪಿಕ್ಸ್ : ಕಂಚಿಗೆ ಮುತ್ತಿಟ್ಟ ಪಿ.ವಿ. ಸಿಂಧು

ಟೋಕಿಯೊ: ವಿಶ್ವ ಚಾಂಪಿಯನ್ ಪಿವಿ ಸಿಂಧು ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಜಯಿಸಿದರು. ಇದರಿಂದ ಮುತ್ತಿನನಗರಿಯ ಹುಡುಗಿ ಒಲಿಂಪಿಕ್ಸ್‌ನಲ್ಲಿ ಸತತ 2ನೇ ಬಾರಿಗೆ ಪದಕಕ್ಕೆ ಮುತ್ತಿಕ್ಕಿದರು.

2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಹೈದರಾಬಾದ್‌ನ ಸಿಂಧು, ಇದೀಗ ಕಂಚಿನ ಪದಕದೊಂದಿಗೆ ತವರಿಗೆ ವಾಪಸಾಗಲಿದ್ದಾರೆ. ಪ್ರತಿಷ್ಠಿತ ಕೂಟದಲ್ಲಿ ಸತತ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಹಾಗೂ 2ನೇ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಇದರಿಂದ ಕೂಟದಲ್ಲಿ ಭಾರತ ಜಯಿಸಿದ ಪದಕಗಳ ಸಂಖ್ಯೆ 2ಕ್ಕೇರಿದೆ. ಇದಕ್ಕೂ ಮೊದಲು ಮೀರಾಬಾಯಿ ಚಾನು, ಮಹಿಳೆಯರ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಜಯಿಸಿದ್ದರು.

ಭಾನುವಾರ ಕಂಚಿನ ಪದಕಕ್ಕಾಗಿ ನಡೆದ ಹಣಾಹಣಿಯಲ್ಲಿ ಪಿವಿ ಸಿಂಧು 21-13, 21-15 ನೇರ ಗೇಮ್‌ಗಳಿಂದ ಚೀನಾದ 8ನೇ ಶ್ರೇಯಾಂಕಿತೆ ಹಿ ಬಿಂಗ್ ಜಿಯಾವೊ ಎದುರು ಜಯ ದಾಖಲಿಸಿದರು. ಶನಿವಾರ ಸೆಮಿಫೈನಲ್‌ನಲ್ಲಿ ಚೀನಾ ತೈಪೆಯ ವಿಶ್ವ ನಂ.1 ತೈ ಜು ಯಿಂಗ್‌ಗೆ ಶರಣಾಗುವ ಮೂಲಕ ಸ್ವರ್ಣ ಪದಕ ಜಯಿಸುವ ಅವಕಾಶ ತಪ್ಪಿಸಿಕೊಂಡಿದ್ದರು. ಎರಡೂ ಗೇಮ್‌ಗಳಲ್ಲೂ ಸಿಂಧು ತೋರಿದ ಆಕರ್ಷಕ ನಿರ್ವಹಣೆ ಎದುರು ಚೀನಾದ ಆಟಗಾರ್ತಿ ಪ್ರಬಲ ಪೈಪೋಟಿ ನೀಡಲು ವಿಫಲರಾದರು.

Donate Janashakthi Media

Leave a Reply

Your email address will not be published. Required fields are marked *