ನವದೆಹಲಿ: ನವೆಂಬರ್ 4ರಿಂದ ದೇಶದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಆರಂಭವಾಗಲಿದೆ. ಕೇಂದ್ರಾಡಳಿತ
ಡಿಸೆಂಬರ್ 4ಕ್ಕೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಡಿ.9ಕ್ಕೆ ಮತದಾರರ ಪಟ್ಟಿಯ ಕರಡನ್ನು ಚುನಾವಣಾ ಆಯೋಗವು ಬಿಡುಗಡೆ ಮಾಡಲಿದೆ. ಅಂತಿಮ ಪಟ್ಟಿಯನ್ನು 2026ರ ಫೆ.7ರಂದು ಬಿಡುಗಡೆ ಮಾಡಲಿದೆ. ಆಯೋಗವು ಬಿಹಾರದಲ್ಲಿ ಇತ್ತೀಚೆಗಷ್ಟೇ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿತ್ತು.
ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರಪಿಗಳ ಮೇಲೆ ಗುಂಡು ಹಾರಿಸಿ ಬಂಧನ
ಎಲ್ಲೆಲ್ಲಿ?
ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ, ಪುದುಚೇರಿ, ಛತ್ತೀಸಗಢ, ಗೋವಾ, ಗುಜರಾತ್, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ನಡೆಯಲಿದೆ.
ಈ ಪೈಕಿ ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಕೇರಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸದಂತೆ ತಡೆಯಲು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಅಲ್ಲಿನ ಸರ್ಕಾರ ಹೇಳಿದೆ.
ಇದನ್ನೂ ನೋಡಿ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸಿದ್ದು ಯಾಕೆ? ಬಲಾಢ್ಯ ಜಾತಿಗಳು ವಿರೋಧಿಸಿದ್ದು ಯಾಕೆ? ರಾಜೇಂದ್ರ ಚೆನ್ನಿ ವಿಶ್ಲೇಷಣೆ
