ನವದೆಹಲಿ |ನಾನು ಮಧ್ಯರಾತ್ರಿಯವರೆಗೆ ಇಲ್ಲಿ ಕುಳಿತು ಬಡ ದಾವೆದಾರರಿಗಾಗಿ ನ್ಯಾಯ ಒದಗಿಸಲು ಸಿದ್ಧ : ಸಿಜೆಐ

ನವದೆಹಲಿ: ‘ನಾನು ನಿಮಗೆ ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೊನೆಯ ಸಾಲಿನಲ್ಲಿ ಕುಳಿತಿರುವ ಅತ್ಯಂತ ದುರ್ಬಲ, ಬಡ ದಾವೆದಾರರಿಗಾಗಿ ನಾನು ಇಲ್ಲಿದ್ದೇನೆ. ಅಗತ್ಯವಿದ್ದರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿ ಕುಳಿತುಕೊಳ್ಳುತ್ತೇನೆ’ಎಂದು ಅವರು ಹೇಳಿದ್ದಾರೆ.

ಬಡ ದಾವೆದಾರರಿಗೆ ನ್ಯಾಯ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಅವರಿಗಾಗಿ ಮಧ್ಯರಾತ್ರಿಯವರೆಗೆ ನ್ಯಾಯಾಲಯದಲ್ಲಿ ಕುಳಿತುಕೊಳ್ಳಲು ಸಿದ್ಧನಿದ್ದೇನೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ : ವಿಶೇಷ ಸಮಗ್ರ ಪರಿಷ್ಕರಣೆ (SIR) | ಧರ್ಮ, ಸಮುದಾಯಗಳನ್ನು ಗುರಿಯಾಗಿಸಿ ಮತದಾನದ ಹಕ್ಕನ್ನು ಕಸಿಯುತ್ತಿರುವ ಚುನಾವಣಾ ಆಯೋಗ – ಡಾ.ಕೆ.ಪ್ರಕಾಶ್ ಆರೋಪ

ಕೇಂದ್ರ ಮತ್ತು ಇತರರ ವಿರುದ್ಧ ತಿಲಕ್ ಸಿಂಗ್ ಡಾಂಗಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ಸಿಜೆಐ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.  ‘ನನ್ನ ನ್ಯಾಯಾಲಯದಲ್ಲಿ ಯಾವುದೇ ಐಷಾರಾಮಿ ಮೊಕದ್ದಮೆಗಳಿಲ್ಲ’ಎಂದು ಸಿಜೆಐ ಹೇಳಿದ್ದಾರೆ.

ಹರಿಯಾಣದ ಹಿಸಾರ್ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24ರಂದು ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಮಾರು 15 ತಿಂಗಳುಗಳ ಕಾಲ ಅವರು ಆ ಹುದ್ದೆಯಲ್ಲಿ ಇರುತ್ತಾರೆ.

ಇದನ್ನೂ ನೋಡಿ : ಕರ್ನಾಟಕದ 17 ಭಾಷೆಗಳಲ್ಲಿ ಸಂವಿಧಾನ ಪೀಠಿಕೆ

Donate Janashakthi Media

Leave a Reply

Your email address will not be published. Required fields are marked *