ಫೋನ್ ಕದ್ದಾಲಿಕೆ ಪ್ರಕರಣ: ತೆಲಂಗಾಣ ಮಾಜಿ ಸಿಎಂ ವಿಚಾರಣೆ ನಡೆಸಿದ ಎಸ್‌ಐಟಿ

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ರನ್ನು ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಿಚಾರಣೆ ನಡೆಸಿದೆ.

ಬಿಆರ್‌ಎಸ್ ಸರ್ಕಾರದ ವಧಿಯಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಚಂದ್ರಶೇಖರ್ ರಾವ್ ಅವರನ್ನು ಸುಮಾರು ೫ ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​

ಈ ವೇಳೆ ಪಕ್ಷದ ಬೆಂಬಲಿಗರು ಚಂದ್ರಶೇಖರ್ ರಾವ್ ಅವರ ಮನೆ ಬಳಿ ಜಮಾವಣೆಗೊಂಡರು. ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ತನಿಖೆಗೆ ಕೆ.ಸಿ.ಆರ್ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಇದೊಂದು ಸುಳ್ಳು ಪ್ರಕರಣವಾಗಿದೆ. ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ. ಅಧಿಕಾರಿಗಳು ಕೆ.ಸಿ.ಆರ್ ಬಳಿ ಏನು ಕೇಳಿದ್ದಾರೆ ಗೊತ್ತಿಲ್ಲ ಎಂದು ಕೆ.ಚಂದ್ರಶೇಖರ್ ರಾವ್ ಪುತ್ರ ಕೆ.ಟಿ.ರಾಮರಾವ್ ತಿಳಿಸಿದ್ದಾರೆ.

ಕೆ.ಚಂದ್ರಶೇಖರ್ ರಾವ್ ಅಧಿಕಾರಾವಧಿಯಲ್ಲಿ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪತ್ರಕರ್ತರು ಸೇರಿದಂತೆ ಗಣ್ಯ ವ್ಯಕ್ತಿಗಳ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕೆ.ಚಂದ್ರಶೇಖರ್ ರವ ವಿಚಾರಣೆ ನಡೆಸಲಾಗಿದೆ.

ಇದನ್ನೂ ನೋಡಿ: ಗಾಂಧೀಜಿಯವರ ವಿಚಾರಗಳೊಂದಿಗೆ ಮುಖಾಮುಖಿ ಆಗಬೇಕಿದೆ – ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *