ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು, ಇದೀಗ ಹಾಸನ ಸೆನ್ ಠಾಣೆ ಪ್ರಕರಣದಲ್ಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ದೇವರಾಜೇಗೌಡ
ಇದೇ ಕಾರಣಕ್ಕೆ, ಆರೋಪಿ ಕಾರ್ತಿಕ್ ಹಾಗೂ ವಿಡಿಯೊಗೆ ಸಂಬಂಧಪಟ್ಟಂತೆ ಹಲವೆಡೆ ಮಾಹಿತಿ ಹಂಚಿಕೊಳ್ಳುತ್ತಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ನೊಟೀಸ್ ನೀಡಿದ್ದಾರೆ.
ಇದನ್ನು ಓದಿ : ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು
‘ಪ್ರಕರಣದ ಆರೋಪಿಗಳು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕಾರ್ಯಕರ್ತರ ಜೊತೆ ಸೇರಿಕೊಂಡು ಸಂಚು ರೂಪಿಸಿ ವಿಡಿಯೊ ಹರಿಬಿಟ್ಟಿರುವ ಮಾಹಿತಿ ಇದೆ. ಹೀಗಾಗಿ, ಆರೋಪಿಗಳು ಹಾಗೂ ವಿಡಿಯೊಗೆ ಸಂಬಂಧಪಟ್ಟಂತೆ ಎಲ್ಲರ ವಿಚಾರಣೆ ಅಗತ್ಯವಿದೆ’.
ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ. ವಿಚಾರಣೆ ನಡೆಸಿದ ಬಳಿಕ, ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಎಂದು ಮೂಲಗಳು ಹೇಳಿವೆ.
ಇದನ್ನು ನೋಡಿ : ಪೆನ್‌ಡ್ರೈವ್ ಪ್ರಕರಣ :ವಿಡಿಯೋ ಬಹಿರಂಗಗೊಳಿಸಿದವರನ್ನು ಕೂಡಲೇ ಬಂಧಿಸಿ, ಸಂತ್ರಸ್ತರನ್ನು ರಕ್ಷಿಸಿ – ಸಿಐಟಿಯು ಆಗ್ರಹ